Asianet Suvarna News Asianet Suvarna News

ಡಿಕೆಶಿಗೆ ಬಿಗ್ ರಿಲೀಫ್: ಕೊನೆಗೂ ತಿಹಾರ್ ಜೈಲಿನಿಂದ ಹೊರಕ್ಕೆ

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್‌fಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ.

Karnataka Congress DK Shivakumaar Gets Bail Money laundering Case
Author
Bengaluru, First Published Oct 23, 2019, 2:36 PM IST

ನವದೆಹಲಿ, (ಅ.23): ಹವಾಲಾ ಹಣ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ಇಂದು (ಬುಧವಾರ) ದೆಹಲಿ ಹೈಕೋರ್ಟ್‌ ಡಿಕೆ ಶಿವಕುಮಾರ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. 

"

ಕಾಯ್ದಿರಿಸಲಾಗಿದ್ದ ಡಿಕೆಶಿ ಜಾಮೀನು ತೀರ್ಪಿಗೆ ಕೋರ್ಟ್‌ನಿಂದ ಮುಹೂರ್ತ ಫಿಕ್ಸ್

 ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​​ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸುಮಾರು 50 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ಇಂದು (ಬುಧವಾರ) ಸಂಜೆಯೊಳಗೆ ತಿಹಾರ್‌ ಜೈಲಿನಿಂದ ಹೊರಬರುವ ಸಾಧ್ಯತೆಗಳಿವೆ.

25 ಲಕ್ಷ ರೂಪಾಯಿ ಶ್ಯೂರಿಟಿ ನೀಡುವಂತೆ ಹಾಗೂ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಅನುಮತಿ ಇಲ್ಲದೇ ವಿದೇಶಕ್ಕೆ ಹೋಗದಂತೆ ಷರತ್ತು ವಿಧಿಸಲಾಗಿದೆ.

ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್... ಮತ್ತೆ ಕರೆಯುತ್ತಾರಂತೆ!

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

'ನವೆಂಬರ್‌ನಿಂದ ಮೋದಿಗೆ ಗಂಡಾಂತರ, ಡಿಕೆಶಿ ಸಿಎಂ‌ ಆಗೋದು ನಿಶ್ಚಿತ'

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು.

ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Follow Us:
Download App:
  • android
  • ios