Asianet Suvarna News Asianet Suvarna News

ಮಂಡ್ಯ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಮಂಡ್ಯ ರೈತರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಕಾವೇರಿ ನೀರಿನ ಸಂಬಂಧ ನಡೆಸಿದ ಹೋರಾಟದಲ್ಲಿ ರೈತರ ವಿರುದ್ಧ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹೂಡಿರುವ ಪ್ರಕರಣಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಹೇಳಿದೆ. 

Karnataka Govt Decide To Withdraw Case Against Mandya Farmers
Author
Bengaluru, First Published Feb 24, 2019, 12:04 PM IST

ಬೆಂಗಳೂರು :  ಕಾವೇರಿ ನೀರಿನ ಸಂಬಂಧ ನಡೆಸಿದ ಹೋರಾಟದಲ್ಲಿ ರೈತರ ವಿರುದ್ಧ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹೂಡಿರುವ ಪ್ರಕರಣಗಳನ್ನು ವಾಪಸ್‌ ಪಡೆಯಲಾಗುವುದು. ಈ ಸಂಬಂಧ ಸಂಪುಟ ಉಪ ಸಮಿತಿ ನಿರ್ಧರಿಸಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೋರಾಟದ ಸಂಬಂಧ 1016 ಪ್ರಕರಣಗಳು ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಪಾಂಡವಪುರ, ಮಳವಳ್ಳಿ ತಾಲ್ಲೂಕಿನ ರೈತರ ವಿರುದ್ಧ ದಾಖಲಾಗಿವೆ. ಈ ಪೈಕಿ ಶೇ. 95ರಷ್ಟುಪ್ರಕರಣಗಳನ್ನು ವಾಪಸ್‌ ಪಡೆಯಲಾಗುವುದು. ಆದರೆ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವರಿಷ್ಠರ ತೀರ್ಮಾನ ಅಂತಿಮ:  ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಹೊಂದಾಣಿಕೆ ಸಂಬಂಧ ಪಕ್ಷದ ವರಿಷ್ಠರಾದ ಎಚ್‌.ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಅವರ ತೀರ್ಮಾನವೇ ಅಂತಿಮವಾಗಿದೆ, ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆಯಿಂದಲೇ ಹೋಗಬೇಕಾಗುತ್ತದೆ. 

ಈ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 23 ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸಿದ್ದರು. ಅದೇ ರೀತಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಹೊಂದಾಣಿಕೆಯಿಂದ ಹೋಗಬೇಕಾಗಿದೆ ಎಂದರು.

Follow Us:
Download App:
  • android
  • ios