Asianet Suvarna News Asianet Suvarna News

ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಕರ್ನಾಟಕ 17 ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷನೆ ಮಾಡಲಾಗಿದೆ. ಜೊತೆಗೆ, ಬಿರುಗಾಳಿ ಸಹಿತ ಮಳೆ ಬರುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Karnataka rain 17 districts get yellow and orange alert and Fishermen not to go sea sat
Author
First Published May 19, 2024, 9:07 PM IST

ಬೆಂಗಳೂರು (ಮೇ 19): ರಾಜ್ಯದಲ್ಲಿ ಪೂರ್ವ ಮುಂಗಾರು ತೀವ್ರ ಚುರುಕುಗೊಂಡಿದ್ದ ರಾಜ್ಯದ ಕರಾವಳಿ ತೀರದ ಜಿಲ್ಲೆಗಳು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ 17 ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಜೊತೆಗೆ, ಕರಾವಳಿ ತೀರದ ಜಿಲ್ಲೆಗಳಲ್ಲಿ ಜನರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಮಾರುತಗಳು ಮೇ18 ರಿಂದ ಮೇ26 ರವರೆಗೆ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಸಲಿವೆ. ಈ ಹಿನ್ನೆಲೆಯಲ್ಲಿ ಮೇ 21ರವರೆಗೆ ರಾಜ್ಯದಾದ್ಯಂತ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಗಂಟೆಗೆ 40-55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರವಾನಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ 20ರಿಂದ ಮೇ 22ರ ಅವಧಿಯಲ್ಲಿ ದಿನವೊಂದಕ್ಕೆ ಸರಾಸರಿ 115.5ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಗಾಲದಿಂದ ಬರಿದಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಮರಳಿದ ಜೀವಕಳೆ

ಬೆಂಗಳೂರಲ್ಲಿ ಸಾಧಾರಣ ಮಳೆ:  ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ವಿಧಾನಸೌಧ, ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಶಿವಾಜಿನಗರ, ಬಸವನಗುಡಿ, ಜಯನಗರ, ಬನಶಂಕರಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೆಳಿಗ್ಗೆಯಿಂದಲೇ ಮಳೆಯಾಗುವ ಸಾಧ್ಯತೆಯಿದೆ. ಇಂದು ರಾತ್ರಿಯೊಳಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಧಿಕ ಮಳೆಯಾಗುವ ಸೂಚನೆಯಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ: ಮೇ 20ರಿಂದ ಮೇ 22ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ತುಂಬಾ ಭಾರೀ ಮಳೆ /ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ತುಂಬಾ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಗಾಳಿ (40-50 kmph) ಉಂಟಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣಾರ್ಭಟ: ಮಳೆಯಿಂದ ಅವಾಂತರ ಸೃಷ್ಠಿ

ಕರಾವಳಿಯಲ್ಲಿ ತಗ್ಗುವ ಮಳೆಯ ಆರ್ಭಟ:  ಮೇ 23ರಿಂದ ಮೇ 25ರವರೆಗೆ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ (40-50 kmph) ತುಂಬಾ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಗಾಳಿ (40-50 kmph) ಉಂಟಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (40-50 kmph) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Latest Videos
Follow Us:
Download App:
  • android
  • ios