Asianet Suvarna News Asianet Suvarna News

ಅಗಲಿದ ಕರ್ನಾಟಕ ಕರ್ಣ ಅಂಬರೀಶ್ ಸಂಕ್ಷಿಪ್ತ ಪರಿಚಯ

ಕನ್ನಡ ಚಿತ್ರರಂಗ ಹಾಗೂ ದಕ್ಷಿಣ ಭಾರತದ ಮೇರು ನಟ ರೆಬೆಲ್​ ಸ್ಟಾರ್​ ಅಂಬರೀಶ್​​ ಇಂದು (ಶನಿವಾರ] ರಾತ್ರಿ ನಿಧನರಾಗಿದ್ದು, ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.

Profile of kannada actor and Former minister Ambareesh
Author
Bengaluru, First Published Nov 24, 2018, 11:23 PM IST

ಬೆಂಗಳೂರು, [ನ,24]: ಕನ್ನಡ ಚಿತ್ರರಂಗ ಹಾಗೂ ದಕ್ಷಿಣ ಭಾರತದ ಮೇರು ನಟ ರೆಬೆಲ್​ ಸ್ಟಾರ್​ ಅಂಬರೀಶ್​​ ಇಂದು (ಶನಿವಾರ] ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದ್ರಿಂದ ಕನ್ನಡ ಚಿತ್ರರಂಗದ ಬಹುದೊಡ್ಡ ಕೊಂಡಿ ಕಳಚಿದೆ.

 ಅಂಬರೀಶ್ ಭಾರತೀಯ ಚಿತ್ರರಂಗದ ನಟರು ಹಾಗೂ ರಾಜಕಾರಣಿಯು ಆಗಿದ್ದರು. 29 ಮೇ 1952ರಂದು ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ ಜನಿಸಿದ್ದರು. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಇವರ ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ.  ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದಿದ್ದರು.

ಮಾಜಿ ಸಚಿವ, ನಟ ಅಂಬರೀಶ್ ವಿಧಿವಶ

ಅಂಬರೀಶ್ ಅವರು 1991 ರಲ್ಲಿ ಕನ್ನಡದ ಖ್ಯಾತ ನಟಿ ಸುಮಲತಾ ಅವರನ್ನು ವಿವಾಹವಾಗಿದ್ದರು. 1972 ರಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಲ್ ಅವರು ಅಂಬರೀಶ್ ಅವರನ್ನು  ಗುರುತಿಸಿ ಕನ್ನಡ ಚಿತ್ರ ರಂಗಕ್ಕೆ ಕರೆತಂದರು.

ಇವರು ಮೊಟ್ಟ ಮೊದಲ ಚಿತ್ರವಾದ "ನಾಗರಾಹಾವು" ಸಿನಿಮಾದಲ್ಲಿ ಖಳ ನಾಯಕನ ಪಾತ್ರದಲ್ಲಿ ಅಭಿನಯಿಸಿದ ಮೊದಲ ಚಿತ್ರವಾಗಿದೆ. ಕನ್ನಡ ಸಿನಿಮಾರಂಗದಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ  ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್  ನೀಡಿ ಗೌರವಿಸಿದೆ. 
* 1998-99: 12ನೇ ಲೋಕಸಭಾ ಸದಸ್ಯರು.
* 1999-04: 13ನೇ ಲೋಕಸಭಾ ಸದಸ್ಯರು.
* 2004-09: 14ನೇ ಲೋಕಸಭಾ ಸದಸ್ಯರು.
* 2006-08: ಕರ್ನಾಟಕ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರು.
* 2008 ರಲ್ಲಿ ಕಾವೇರಿ ನೀರಿನ ವಿವಾದದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
* 2012: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು.
* 2013 ರ ಚುನಾವಣೆಯಲ್ಲಿ ಗೆದ್ದು ಕರ್ನಾಟಕ ರಾಜ್ಯ ವಸತಿ ಸಚಿವರು.
ಪ್ರಶಸ್ತಿಗಳು:
* ಕರ್ನಾಟಕ ರಾಜ್ಯ ಪ್ರಶಸ್ತಿ - ಅತ್ಯುತ್ತಮ ನಟ - 1982.
* ಕರ್ನಾಟಕ ರಾಜ್ಯ ಪ್ರಶಸ್ತಿ - ಅತ್ಯುತ್ತಮ ಸಹಾಯ ನಟ - ಮಸಣದ ಹೂವು(1985-86)
* ಫಿಲ್ಮ್ ಫೇರ್ ಪ್ರಶಸ್ತಿ - ಅತ್ಯುತ್ತಮ ನಟ - ಒಲವಿನ ಉಡುಗೊರೆ.
* ಎನ್.ಟಿ.ಆರ್ ನ್ಯಾಷನಲ್ ಪ್ರಶಸ್ತಿ - 2005.
* ಜೀವಮಾನ ಫಿಲ್ಮ್ ಫೇರ್ ಪ್ರಶಸ್ತಿ - 2009.
* ನಂದಿ ಪ್ರಶಸ್ತಿ( ಆಂದ್ರಸರ್ಕಾರ) - 2009.
* ಟಿವಿ9 ಸ್ಯಾಂಡಲ್ ವುಡ್ ಸ್ಟಾರ್ ಪ್ರಶಸ್ತಿ - 2012.
* ವಿಷ್ಣುವರ್ದನ್ ಪ್ರಶಸ್ತಿ (ಕರ್ನಾಟಕ ಸರ್ಕಾರ) - 2011.
* ಗೌರವ ಡಾಕ್ಟರೇಟ್ ಕರ್ನಾಟಕ ವಿವಿ) - 2013.

Follow Us:
Download App:
  • android
  • ios