Asianet Suvarna News Asianet Suvarna News

ಕರ್ನಾಟಕಕ್ಕೆ 2ನೇ ಹಂತದ ಪ್ರವಾಹ‌ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ, ಸಂಪತ್ತಿನ ನಷ್ಟ ಅನುಭವಿಸಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ  2ನೇ ಹಂತದ ಪರಿಹಾರ ಹಣ ಘೋಷಣೆ ಮಾಡಿದೆ. ಒಟ್ಟು ಏಳು ರಾಜ್ಯಗಳಿಗೆ 5,908 ಕೋಟಿ ರೂ ಅಧಿಕ ಅತಿವೃಷ್ಟಿ ಪರಿಹಾರ ನೀಡಲು ಅನುಮತಿ ನೀಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ಸಿಕ್ಕಿದೆ.

Union Govt approves Rs 1869 crore To Karnataka floods relief
Author
Bengaluru, First Published Jan 6, 2020, 7:35 PM IST

ಬೆಂಗಳೂರು/ನವದೆಹಲಿ, [ಜ.06]: ರಾಜ್ಯದಲ್ಲಿ ಉಂಟಾಗಿದ್ದ ಪ್ರವಾಹಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತೆ 1869.85 ಕೋಟಿ ರೂ. ಪರಿಹಾರ ಘೋಷಿಸಿದೆ.

ಇಂದು [ಸೋಮವಾರ] ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಒಟ್ಟು 5908.56 ಕೋಟಿ ರೂ. ಪರಿಹಾರ ನೀಡಲು ತೀರ್ಮಾನಿಸಿದೆ.

ಬ್ರೇಕಿಂಗ್: ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಮಧ್ಯಪ್ರದೇಶಕ್ಕೆ 1749.73 ಕೋಟಿ ರೂ., ಮಹಾರಾಷ್ಟ್ರ 956.93 ಕೋಟಿ ರೂ., ಅಸ್ಸಾಂಗೆ 616.63 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 284.93 ಕೋಟಿ ರೂ, ತ್ರಿಪುರಾಕ್ಕೆ 63.32 ಕೋಟಿ ರೂ ಮತ್ತು ಉತ್ತರ ಪ್ರದೇಶಕ್ಕೆ 367.17 ಕೋಟಿ ರೂ. ಪ್ರವಾಹ ಪರಿಹಾರ ನಿಧಿಗೆ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕಕ್ಕೆ [1869.85 ಕೋಟಿ ರೂ] ಸಿಂಹಪಾಲು ಸಿಕ್ಕಿದೆ.

ಈ ಹಿಂದೆ ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ 1200 ಕೋಟಿ ರೂ.ಗಳ ಮಧ್ಯಂತರ ಪರಿಹಾರ ನೀಡಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ 1200 ಕೋಟಿ ರೂ. ಹಣ ನೀಡಿತ್ತು.

ರಾಜ್ಯದಲ್ಲಿ ಪ್ರವಾಹದಿಂದ  ಒಟ್ಟಾರೆ 38 ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ಕೇಂದ್ರಕ್ಕೆ ವರದಿ ನೀಡಲಾಗಿತ್ತು. ಈ ಪೈಕಿ ತುರ್ತಾಗಿ 3800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು.  

ಆದ್ರೆ ಕೇಂದ್ರ ಸರ್ಕಾರ ಸದ್ಯಕ್ಕೆ 1200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಮಾತ್ರ ಘೋಷಣೆ ಮಾಡಿತ್ತು. ಇದೀಗ ಮತ್ತೆ 2ನೇ ಹಂತದಲ್ಲಿ 1869.85 ಕೋಟಿ ರೂ. ಬಿಡುಗಡೆಗೊಳಿಸಿದೆ.

ಮೊನ್ನೇ ನರೇಂದ್ರ ಮೋದಿ ಅವರು ಕರ್ನಾಟಕ್ಕೆ ಭೇಟಿ ವೇಳೆ ಬಿಎಸ್ ಯಡಿಯೂರಪ್ಪ ಅವರು ಅನುದಾನಕ್ಕೆ ಬೇಡಿಕೆ ಇಟ್ಟಿರುವುದನ್ನು ಇಲ್ಲಿ ಸ್ಮರಿಸಹುದು.

Follow Us:
Download App:
  • android
  • ios