Asianet Suvarna News Asianet Suvarna News

ವಾಯು​ಭಾರ ಕುಸಿ​ತ: ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಳೆ ಎಚ್ಚ​ರಿ​ಕೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಬಗ್ಗೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಎಚ್ಚರಿಕೆಯ ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ಮಹಾಚಂಡಮಾರುತವು ರೂಪುಗೊಂಡಿದ್ದು, ಕರಾವಳಿ ಭಾಗದಲ್ಲಿ ಶುಕ್ರ​ವಾರ ಭಾರಿ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Heavy rain to be lashes in coastal karnataka
Author
Bangalore, First Published Nov 1, 2019, 10:57 AM IST

ಉಡು​ಪಿ(ನ.01): ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಬಗ್ಗೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಎಚ್ಚರಿಕೆಯ ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ. 

ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ಮಹಾಚಂಡಮಾರುತವು ರೂಪುಗೊಂಡಿದ್ದು, ವಾಯುವ್ಯ ದಿಕ್ಕಿನೆಡೆಗೆ ಮುಂದುವರಿಯುತ್ತಾ ರಾಜ್ಯದ ಕರಾವಳಿ ಭಾಗದಲ್ಲಿ ಶುಕ್ರ​ವಾರ ಭಾರಿ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಬುಲ್‌​ಟ್ರಾಲ್‌, ಲೈಟ್‌ ಫಿಶಿಂಗ್‌ ನಡೆ​ಸಿ​ದ್ರೆ ಡೀಸೆಲ್‌ ಸಬ್ಸಿಡಿ ಕಡಿ​ತ

ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ, ಮೀನುಗಾರರು / ಪ್ರವಾಸಿಗರು ನದಿ ತೀರ / ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ/ ಕೆರೆ/ ನದಿ ತೀರ/ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು, ಮಕ್ಕಳು/ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬ/ ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಿಗೆ ತಲುಪಬೇಕು. ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದು ಸೂಚಿಸಲಾಗಿದೆ .

ತುರ್ತು ಸೇವೆಗೆ ಟೋಲ್‌ ಫ್ರೀ ನಂ: 1077, ದೂರವಾಣಿ ಸಂಖ್ಯೆ : 0820-2574802 / 2574360 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆಯಾಗುತ್ತಿದ್ದಂತೆ ಮಳೆ:

ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡ ಮಾರುತ ಉಂಟಾಗಿದ್ದು, ಅದರ ಪರಿಣಾಮವಾಗಿ ಗುರುವಾರ ಸಂಜೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬುಧವಾರ ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ವಸಂತಿ ಮುದ್ದು ಹರಿಜನ ಅವರ ವಾಸದ ಮನೆಗೆ ಗಾಳಿಮಳೆಗೆ ಮರಬಿದ್ದು ಭಾಗಶಃ ಹಾನಿಯಾಗಿ ಅವರಿಗೆ ಸುಮಾರು 20 ಸಾವಿರ ರು. ನಷ್ಟವಾಗಿದೆ.

ಬುಧವಾರ ಮಳೆ ಸಂಪೂರ್ಣ ಹಿಮ್ಮುಖವಾಗಿದ್ದು, ಗುರುವಾರ ಮುಂಜಾನೆವರೆಗೆ ಜಿಲ್ಲೆಯಲ್ಲಿ ಸರಾಸರಿ 0.40 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 0.60 ಮಿ.ಮೀ., ಕಾರ್ಕಳ ತಾಲೂಕಿನಲ್ಲಿ 1.00 ಮಿ.ಮೀ. ಮಳೆಯಾಗಿದೆ. ಆದರೆ ಕುಂದಾಪುರ ತಾಲೂಕಿನಲ್ಲಿ ಮಳೆಯಾಗಿಲ್ಲ.

ಸಿದ್ರಾಮಯ್ಯ ಲೋಕಾಯುಕ್ತವನ್ನು ಕೊಂದು ಹಾಕಿದ್ರು: ಶೋಭಾ

Follow Us:
Download App:
  • android
  • ios