ಹೊಸಕೋಟೆ ತವರುಮನೆ: ಸುಮಲತಾ ಅಂಬರೀಷ್ ಹಾದಿಯಲ್ಲಿ ಪದ್ಮಾವತಿ ಸುರೇಶ್?

ಘಟಾನುಘಟಿಗಳ ಮತ ಸೆಣಸಾಟಕ್ಕೆ ಹೊಸಕೋಟೆ ಸಾಕ್ಷಿಯಾಗುತ್ತಿದೆ. ಬಿಜೆಪಿಯಿಂದ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್, ಕಾಂಗ್ರೆಸ್‌ನಿಂದ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ, ಪಕ್ಷೇತರನಾಗಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಣಕ್ಕಿಳಿದಿದ್ದಾರೆ. ಎಲ್ಲರ ಬಾಯಲ್ಲೂ ಸ್ವಾಭಿಮಾನದ ಮಂತ್ರ ಇದೆ. ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಸುವರ್ಣನ್ಯೂಸ್ ಜೊತೆ ಮಾತನಾಡಿದರು.

Share this Video
  • FB
  • Linkdin
  • Whatsapp

ಹೊಸಕೋಟೆ (ನ.16): ಘಟಾನುಘಟಿಗಳ ಮತ ಸೆಣಸಾಟಕ್ಕೆ ಹೊಸಕೋಟೆ ಸಾಕ್ಷಿಯಾಗುತ್ತಿದೆ. ಬಿಜೆಪಿಯಿಂದ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್, ಕಾಂಗ್ರೆಸ್‌ನಿಂದ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ, ಪಕ್ಷೇತರನಾಗಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಣಕ್ಕಿಳಿದಿದ್ದಾರೆ.

ಎಲ್ಲರ ಬಾಯಲ್ಲೂ ಸ್ವಾಭಿಮಾನದ ಮಂತ್ರ ಇದೆ. ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಸುವರ್ಣನ್ಯೂಸ್ ಜೊತೆ ಮಾತನಾಡಿದರು. ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ‘ಹೊರಗಿನವರು’ ಎಂಬ ಆರೋಪಕ್ಕೆ ಉತ್ತರ ನೀಡಿದರು.

ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

Related Video