ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ: ಪರಮೇಶ್ವರ್

ಡಿಕೆಶಿ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್‌ಗೂ ಐಟಿ ಶಾಕ್| ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು|  ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ

Share this Video
  • FB
  • Linkdin
  • Whatsapp

ಬೆಂಗಳೂರು[ಅ.10]: ಡಿಕೆಶಿ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆ ಹಾಗೂ ಅವರ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳ ಮೇಲೆ ದಾಳೀ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ತುಮಕೂರಿನ ಅತ್ಯಂತ ಪ್ರಸಿದ್ಧ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೂ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. 

ಈ ಸಂಬಂಧ ಮೊದಲ ಪ್ರತಿಕ್ರಿಯೆ ನಿಡಿರುವ ಡಾ. ಜಿ. ಪರಮೇಶ್ವರ್ ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ, ನಮ್ಮಲ್ಲಿನ ತಪ್ಪುಗಳಿದ್ದರೆ ದಾಳಿ ಮಾಡಲಿ ಎಂದಿದ್ದಾರೆ.

Related Video