
ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!
- ಹುಬ್ಬಳ್ಳಿ ಕೆ.ಎಲ್.ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು
- ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ಕಳುಹಿಸಿದ ಪೊಲೀಸ್ ಇಲಾಖೆ
- ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ ಕಾಂಗ್ರೆಸ್ ಮತ್ತು ಹಿಂದೂಪರ ಸಂಘಟನೆಗಳು
ಹುಬ್ಬಳ್ಳಿ (ಫೆ.17): ನಗರದ ಕೆ.ಎಲ್.ಇ ಕಾಲೇಜಿನಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಕಳುಹಿಸಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್!
ದು ಕಾಂಗ್ರೆಸ್ ಮತ್ತು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದ್ದು, ಪ್ರತಿಭಟನೆಗಳು ನಡೆದಿವೆ. ಅದರ ಬೆನ್ನಲ್ಲೇ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇಲ್ಲಿದೆ ಡೀಟೆಲ್ಸ್...