ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

Share this Video
  • FB
  • Linkdin
  • Whatsapp

ಬೆಂಗಳೂರು[ಜ.14]: ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'56 ಇಂಚಿನ ಮೋದಿಗೆ ಮಾತೃ ಹೃದಯ ಇಲ್ಲ, ಕೈ ಅಧಿಕಾರಕ್ಕೆ ಬಂದ್ರೆ 10ಕೇಜಿ ಅಕ್ಕಿ'

ಸರ್ಕಾರ ಸದ್ಯ ನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಇಳಿಸಲು ನಿರ್ಧರಿಸಿದೆ. ಈ ಸಂಬಂಧ ಆಹಾರ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, 7 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ನೀಡಲು ತಿಳಿಸಿದೆ. 

ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗೆ ಹಣ ನಿಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

2 ಕೆಜಿ ಅಕ್ಕಿ ಇಳಿಸಿದರೆ, ವಾರ್ಷಿಕ 2000 ಕೋಟಿ ರೂ. ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವಾಗಲಿದೆ. 8 ಜಿಲ್ಲೆಗಳ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಈ ಬಗ್ಗೆ ಚರ್ಚೆ ಮಾಡಲಾಗಿದೆ.

Related Video