Karnataka News Live: ಚೀನಾದ ಡೀಪ್ಸೀಕ್ಗೆ ಮೆಟಾ ಕೌಂಟರ್, ಅತ್ಯಾಧುನಿಕ ಲಾಮ 4 AI ಬಿಡುಗಡೆ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್ಗಟ್ಟಲೆ ದಾಖಲೆಗಳಿದ್ದು, ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನನ್ನ ವ್ಯವಹಾರದ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಸವಾಲು ಹಾಕಿದ್ದಾರೆ. ಇತ್ತ ಬೆಸ್ಕಾಂ ಮತ್ತೊಂದು ಶಾಕ್ ನೀಡಿದೆ. ಕೆಇಆರ್ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್ ಸಂಪರ್ಕ ನೀಡಬಾರದು. ಅಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯದ ನಿವೇಶನದಾರರಿಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನೂ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ ಶುಕ್ರವಾರ ಬೆಸ್ಕಾಂ ಆದೇಶ ಹೊರಡಿಸಿದೆ.