ಬೌನ್ಸ್ ಸ್ಕೂಟರ್‌ಗೆ ಬೆಂಕಿ; ಆರೋಪಿಗಳನ್ನು ಬಂಧಿಸಿದ ಪೊಲೀಸ್!

By Web Desk  |  First Published Nov 27, 2019, 12:43 PM IST

ಬೌನ್ಸ್ ಸ್ಕೂಟರ್‌ಗೆ ಬೆಂಕಿ ಹಚ್ಚಿದ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪೊಲೀಸರು ಸ್ಕೂಟರ್‌ಗೆ ಬೆಂಕಿ ಹಚ್ಚಿ ವಿಕೃತ ಆನಂದ ಪಡೆಯುತ್ತಿದ್ದ ನಟೋರಿಯಸ್ ಗ್ಯಾಂಗ್ ಹೆಡೆಮುರಿ ಕಟ್ಟಿದ್ದಾರೆ.


ಬೆಂಗಳೂರು(ನ.27): ಬೆಂಗಳೂರಿನಲ್ಲಿ ಬೌನ್ಸ್ ಆ್ಯಪ್ ಆಧಾರಿತ ಸ್ಕೂಟರ್ ಸೇವೆ ಹೆಚ್ಚು ಜನಪ್ರೀಯವಾಗಿದೆ. ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ  ಸ್ಕೂಟರ್ ಸೇವೆ ನೀಡುತ್ತಿರುವ ಬೌನ್ಸ್, ದಿನ ನಿತ್ಯದ ಬದುಕಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಆದರೆ ಬೌನ್ಸ್ ಸ್ಕೂಟರ್ ಎಲ್ಲೆಂದರಲ್ಲಿ ನಿಲ್ಲಿಸುವುದು, ಟೈಯರ್ ಸೇರಿದಂತೆ ಬಿಡಿ ಭಾಗಗಳನ್ನು ಕದ್ದೊಯ್ಯು ಪ್ರಕರಣದ ಬೆನ್ನಲ್ಲೇ ಸ್ಕೂಟರ್‌ಗೆ ಬೆಂಕಿ ಹಚ್ಚುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೌನ್ಸ್ ಸ್ಕೂಟರ್‌ಗೆ ಬೆಂಕಿ ಹಚ್ಚಿದ  ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Tap to resize

Latest Videos

undefined

ಇದನ್ನೂ ಓದಿ: ಬೌನ್ಸ್‌ ಸ್ಕೂಟರ್‌ ಬಳಸಿ ಬಳಿಕ ಬೆಂಕಿ ಹಚ್ಚಿದರು!

ಬೆಂಗಳೂರಿನನಲ್ಲಿ ಬೌನ್ಸ್ ಸ್ಕೂಟರ್‌ಗೆ ಬೆಂಕಿ ಹಚ್ಚಿ ವಿಕೃತ ಆನಂದ ಪಡೆಯುತ್ತಿದ್ದ ನಟೋರಿಯಸ್ ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಸಂಪಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಲರಾಜ್,ಹೇಮಂತ್,ಭರತ್ ಗೌಡ,ಶಿವು,ಕಬೀರ್ ಬಂಧಿತ ಆರೋಪಿಗಳು. 

ಇದನ್ನೂ ಓದಿ: ಒಂದು ವರ್ಷದಲ್ಲಿ ಒಂದು ಲಕ್ಷ; ದಾಖಲೆ ಬರೆದ ಬೌನ್ಸ್‌ ರೈಡ್‌!

ಕುಡಿದ ಅಮಲಿನಲ್ಲಿ ಆರೋಪಿಗಳು ಬೌನ್ಸ್ ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದರು. ಸುಮಾರು 10ಕ್ಕೂ ಹೆಚ್ಚು ಬೈಕ್‌ಗಳಿಗೆ ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆ. ಬೆಂಗಳೂರಿನ ಹೊರ ವಲಯಕ್ಕೆ ಸ್ಕೂಟರ್ ಕೊಂಡೊಯ್ದು ಬೆಂಕಿ ಹಚ್ಚುತ್ತಿದ್ದರು. ಬೌನ್ಸ್ ಕಂಪನಿ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 

ಇದನ್ನೂ ಓದಿ: ಪೆಟ್ರೋಲ್ ಕಳ್ಳರ ಕೈಚಳಕ CCTVಯಲ್ಲಿ ಸೆರೆ; ಖದೀಮರಿಗೆ ನಿಮ್ಮ ಗಾಡಿಯಲ್ಲ ಬೇರೆ!

ಆರೋಪಿಗಳ ವಿಚಾರಣೆಯಲ್ಲಿ ಬೆಂಗಳೂರಿನ ಸುತ್ತ ಮುತ್ತ ಹಲವು ಬೈಕ್ ಸುಟ್ಟಿರುವ ಮಾಹಿತಿ ಬಹಿರಂಗಗೊಂಡಿದೆ. ಇನ್ನು ಬೈಕ್ ಕಳ್ಳತನದ ಕುರಿತು ವಿಚಾರಣೆ ನಡೆಯುತ್ತಿದೆ. ಒಟ್ನಲ್ಲಿ ಅತ್ಯುತ್ತಮ ಸೇವೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಜನರಿಗೆ ಇದು ಎಚ್ಚರಿಕೆಯ ಪಾಠವಾಗಲಿ.

ನವೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

click me!