ಭಾರತದ ಆಟೋಮೊಬೈಲ್ ಕಂಪನಿಗಳು ಒಂದರ ಹಿಂದೆ ಒಂದರಂತೆ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುತ್ತಿದೆ. ಬೆಂಗಳೂರಿನ ಎದರ್ ಕಂಪನಿ ಈಗಾಗಲೇ ಎದರ್ 450 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ಇತ್ತೀಚೆಗಷ್ಟೇ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ. ಇದೀಗ ಬೆಂಗಳೂರಿನಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್ ಆಗಿದೆ. ನೂತನ ಸ್ಕೂಟರ್ ವಿಶೇಷತೆ ಇಲ್ಲಿದೆ.
ಬೆಂಗಳೂರು(ಜ.25): ಎಲೆಕ್ಟ್ರಾನಿಕ್, ತಾಂತ್ರಿಕತೆ, ವಿಜ್ಞಾನ ಸೇರಿದಂತೆ ಆಧುನಿಕ ಭಾಷೆಗಳಲ್ಲಿ ಬೆಂಗಳೂರು ಇತರ ಎಲ್ಲಾ ನಗರಗಳಿಗಿಂತ ಮುಂದಿದೆ. ದೇಶದ ಇತರ ನಗರಗಳಿಗಿಂತ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ನಿರ್ಮಾಣ ಬೆಂಗಳೂರಿನಲ್ಲೇ ಆಗುತ್ತಿದೆ. ಇದೀಗ ಟಿವಿಎಸ್ ಸ್ಕೂಟರ್ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ.
Live from the Launch of TVS Motor's Electric Vehicle https://t.co/U1XB4zWlJh
— Nitin Gadkari (@nitin_gadkari)undefined
ಇದನ್ನೂ ಓದಿ: ಆಧುನಿಕ ತಂತ್ರಜ್ಞಾನದೊಂದಿಗೆ TVS ಅಪಾಚೆ ಬೈಕ್ ಬಿಡುಗಡೆ!
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಐಕ್ಯೂಬ್ ಬಿಡುಗಡೆ ಮಾಡಿದರು. ಗಡ್ಕರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಸಾಥ್ ನೀಡಿದರು. ಟಿವಿಎಸ್ ಬಿಡುಗಡೆ ಮಾಡಿರುವ ನೂತನ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ 1.15 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ ಬೆಂಗಳೂರು). ಸದ್ಯ ಬೆಂಗಳೂರು ನಗರದಲ್ಲಿ ಮಾತ್ರ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ.
ಇದನ್ನೂ ಓದಿ: ಹೊಸ ಅವತಾರದಲ್ಲಿ TVS Nಟಾರ್ಕ್ 125 ಸ್ಕೂಟರ್ ಬಿಡುಗಡೆ!
ಟಿವಿಎಸ್ ಐಕ್ಯೂಬ್ ಇಲೆಕ್ಟ್ರಿಕ್ ಪರಿಸರ ಸ್ನೇಹಿ ಹಾಗೂ ಸಂಪರ್ಕಿತ, ಆರಾಮದಾಯಕ ಸ್ಕೂಟರ್ ಆಗಿದ್ದು, ಅತ್ಯಾಧುನಿಕ ಡ್ರೈವ್‍ಟ್ರೈನ್ ಹಾಗೂ ಮುಂದಿನ ಪೀಳಿಗೆಯ ಸ್ಮಾರ್ಟ್ ಕನೆಕ್ಟ್ ಪ್ಲಾ ಟ್‍ಫಾರಂನಿಂದ ಚಾಲಿತವಾಗಿದೆ. 5,000 ರೂಪಾಯಿ ನೀಡಿ ನೂತನ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:ಮಧ್ಯಮ ವರ್ಗದ ಡಾರ್ಲಿಂಗ್ ಟಿವಿಎಸ್ ರೇಡಿಯೋನ್!
ಟಿವಿಎಸ್ ಮೋಟಾರ್ ಕಂಪನಿಯ ಮೊದಲ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಇದಾಗಿದೆ. ಪ್ರತಿ ತಿಂಗಳು 1000 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ಮಾಡಲು ಟಿವಿಎಸ್ ನಿರ್ಧರಿಸಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 75 ಕಿ.ಮೀ ಮೈಲೇಜ್ ನೀಡಲಿದೆ. ಸ್ಕೂಟರ್ ಗರಿಷ್ಠ ವೇಗ 78 KMPH.
ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಫಾಸ್ಟ್ ಚಾರ್ಜಿಂಗ್ ಲಭ್ಯವಿಲ್ಲ. ಸಂಪೂರ್ಣ ಚಾರ್ಜ್‌ಗೆ 5 ಗಂಟೆ ಸಮಯ ತೆಗೆದುಕೊಳ್ಳುತ್ತದೆ. 6 bhp ಪವರ್ ಹಾಗೂ 140 Nm ಪೀಕ್ ಟಾರ್ಕ್ ಉತ್ಪಾದಿಸಿಬಲ್ಲ ಸಾಮರ್ಥ್ಯ ಹೊಂದಿದೆ.