ಎಲೆಕ್ಟ್ರಿಕ್ ವಾಹನ ಖರೀದಿಸೋ ಗ್ರಾಹಕರಿಗೆ ಕೇಂದ್ರ ಸರ್ಕಾರ್ ಬಂಪರ್ ಯೋಜನೆ ಜಾರಿ ಮಾಡಲು ಮುಂದಾಗಿದೆ. ಮೋದಿ ಸರ್ಕಾರದ ಹೊಸ ಯೋಜನೆ ಏನು? ಇಲ್ಲಿದೆ ಸಂಪೂರ್ಣ ವಿವರ.
ನವದೆಹಲಿ(ಫೆ.13): ದೇಶವನ್ನ ಮಾಲಿನ್ಯದಿಂದ ಮುಕ್ತವಾಗಿಸಲು ಇದೀಗ ಎಲೆಕ್ಟ್ರಿಕ್ ವಾಹನಕ್ಕೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಇದರ ಅಂಗವಾಗಿ ಕೇಂದ್ರ ಸರ್ಕಾರ ಇದೀಗ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಸುಲಭ ಸಾಲ ಸೌಲಭ್ಯ ಒದಗಿಸಲು ಸೂಚಿಸಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನ ಮಾರಾಟಕ್ಕೆ ಸೂಕ್ತ ಕ್ರಮ ಕೈಗೊಂಡಿದೆ.
ಇದನ್ನೂ ಓದಿ: ನೆಲಕ್ಕೆ ಬಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಸುಲಭವಾಗಿ ಎತ್ತಲು ಇಲ್ಲಿದೆ ಟಿಪ್ಸ್!
undefined
ಹಣಕಾಸು ಇಲಾಖೆಗೆ ಸೂಚನೆ ನೀಡಿರುವ ಪ್ರಧಾನ ಮಂತ್ರಿ ಕಚೇರಿ, ಸುಲಭ ಸಾಲ, ಗರಿಷ್ಠ ಸಾಲ ನೀಡಲು ಸೂಚಿಸಿದೆ. ಕಡಿಮೆ ಬಡ್ಡಿ ದರ ಹಾಗೂ ಸಬ್ಸಿಡಿ ನೀಡಲು ಸೂಚಿಸಿದೆ. ಹೀಗಾಗಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಖರೀದಿ ಸುಲಭವಾಗಿದೆ. ಇದರ ಜೊತೆಗೆ ತಿರಿಗೆ ವಿನಾಯಿತಿ ನೀಡಲು ಕೂಡ ಕೇಂದ್ರ ಸರ್ಕಾರ ಮುಂದಾಗಿದೆ.
ಇದನ್ನೂ ಓದಿ: ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ..! ನಂಬರ್ ಪ್ಲೇಟ್ ಮೇಲೆ ಏನೂ ಬರೆಯಂಗಿಲ್ಲ!
ಅತ್ಯಂತ ಕಡಿಮೆ ಡೌನ್ ಪೇಮೆಂಟ್(ಮುಂಗಡ ಪಾವತಿ) ಮೂಲಕ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಲು ಸೂಚಿಸಿದೆ. ಇನ್ನು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಶನ್ ನಿರ್ಮಾಣ, ಹಾಗೂ ಸುಲಭ ಚಾರ್ಜಿಂಗ್ ವಿಧಾನಗಳನ್ನ ಅನುಸರಿಸಲು ಸೂಚಿಸಿದೆ. ಕೇಂದ್ರ ಸರ್ಕಾರದ ನೂತನ ಯೋಜನೆಯಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಅಗ್ಗವಾಗಿದೆ.