ಹೀರೋ AE-47 ಎಲೆಕ್ಟ್ರಿಕ್ ಬೈಕ್ ಅನಾವರಣ, 160KM ಮೈಲೇಜ್!

Suvarna News   | Asianet News
Published : Feb 05, 2020, 06:45 PM IST
ಹೀರೋ AE-47 ಎಲೆಕ್ಟ್ರಿಕ್ ಬೈಕ್ ಅನಾವರಣ, 160KM ಮೈಲೇಜ್!

ಸಾರಾಂಶ

ಭಾರತದ ಅತೀ ದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಹಿರೋ ಮೋಟಾರ್ಸ್ ಹೊಚ್ಚ ಹೊಸ ಬೈಕ್ ಬಿಡುಗಡೆ ಮಾಡಿದೆ. ಕಡಿಮೆ ಬೆಲೆ, ಗರಿಷ್ಠ ಮೈಲೇಜ್ ರೇಂಜ್ ಹಾಗೂ ಹಲವು ವಿಶೇಷತೆಗಳೊಂದಿಗೆ ಹಿರೋ AE-47 ಎಲೆಕ್ಟ್ರಿಕ್ ಬೈಕ್ ಅನಾವರಣ ಮಾಡಿದೆ. 

ನವದೆಹಲಿ(ಫೆ.05): ಗ್ರೇಟರ್ ನೋಯ್ಡಾದಲ್ಲಿನ ಅಟೋ ಎಕ್ಸ್ಪೋ 2020ರಲ್ಲಿ ಹಿರೋ ಎಲೆಕ್ಟ್ರಿಕ್ ನೂತನ ಬೈಕ್ ಬಿಡುಗಡೆ ಮಾಡಿದೆ. ನೂತನ ಹಿರೋ AE-47 ಎಲೆಕ್ಟ್ರಿಕ್ ಬೈಕ್ ಆಕರ್ಷಕ ವಿನ್ಯಾಸ ಹೊಂದಿದೆ. ಇದು ಕಂಪನಿಯ ಮೊದಲ ಎಲೆಕ್ಟ್ರಿಕ್ ಬೈಕ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ TVS ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್ ಮಾಡಿದ ಗಡ್ಕರಿ!

 ಹಿರೋ AE-47 ಎಲೆಕ್ಟ್ರಿಕ್ ಬೈಕ್ ಸಂಪೂರ್ಣವಾಗಿ ಭಾರತದಲ್ಲಿ ತಯಾರಾಗಿಲ್ಲ. ಆಟೋ ಎಕ್ಸ್ಪೋದಲ್ಲಿ ಅನಾವರಣ ಮಾಡಿರುವ ನೂತನ  ಹಿರೋ AE-47 ಎಲೆಕ್ಟ್ರಿಕ್ ಬೈಕ್ ಬೆಲೆ 1.25 ಲಕ್ಷ ರೂಪಾಯಿಂದ 1.50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್; ಇಲ್ಲಿದೆ ಬೆಲೆ, ವಿಶೇಷತೆ!

ಹೈ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಬೈಕ್ ಆಗಿರುವ  ಹಿರೋ AE-47 ಗರಿಷ್ಠ ವೇಗ 100 ಕಿ.ಮೀ ಪ್ರತಿ ಗಂಟೆಗೆ ನೀಡಲಿದೆ. ನೂತನ ಬೈಕ್ 4,000 W ಎಲೆಕ್ಟ್ರಿಕ್ ಮೋಟಾರ್ ಬಳಸಲಾಗಿದೆ.  ಹಗುರವಾದ ಲಿಥಿಯಂ ಐಯಾನ್ 48V/3.5 kWh ಬ್ಯಾಟರಿ ಹೊಂದಿರುವ ಹಿರೋ AE-47 ಬೈಕ್, ಸಂಪೂರ್ಣ ಚಾರ್ಜ್‌ಗೆ 4 ಗಂಟೆ ಸಮಯ ತೆಗೆದುಕೊಳ್ಳಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 160 ಕಿ.ಮೀ ಮೈಲೇಜ್ ರೇಂಜ್ ನೀಡಲಿದೆ. 
 

PREV
click me!

Recommended Stories

ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?
ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು