ದೇಶದಲ್ಲಿನ್ನು ಎಲೆಕ್ಟ್ರಿಕ್ ವಾಹನ ಚಾರ್ಚಿಂಗ್ ಸುಲಭ; ಕೇಂದ್ರದ ಮಹತ್ವದ ಹೆಜ್ಜೆ!

By Suvarna News  |  First Published Nov 24, 2020, 3:05 PM IST

ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನ ಮೇಲೆ ಸಬ್ಸಿಡಿ ನೀಡುತ್ತಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ಎಲೆಕ್ಟ್ರಿಕ್ ವಾಹನ ಖರೀದಿಸಿದವರಿಗೆ ಇದೀಗ ಕೇಂದ್ರ ಮತ್ತೊಂದು ಕೂಡುಗೆ ನೀಡುತ್ತಿದೆ.
 


ನವದೆಹಲಿ(ನ.24); ಕೇಂದ್ರ ಸರ್ಕಾರ ಈಗಾಗಲೇ ಎಲೆಕ್ಟ್ರಿಕ್ ವಾಹನ ಬಳಕೆಗೆ ಹಲವು ಯೋಜನೆ ಜಾರಿಗೆ ತಂದಿದೆ.  ಇದೀಗ ಎಲೆಕ್ಟ್ರಿಕ್ ವಾಹನ ಖರೀದಿಸಿದವರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಮತ್ತೊಂದು ಹೆಚ್ಚಿ ಇಟ್ಟಿದೆ. ದೇಶಾದ್ಯಂತ 69,000 ಸಾವಿರ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ವ್ಯವಸ್ಥೆಗೆ ಕೇಂದ್ರ ಮುಂದಾಗಿದೆ.

ಸತತ 4ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

Tap to resize

Latest Videos

undefined

ನಗರ, ಹೆದ್ದಾರಿ ಸೇರಿದಂತೆ ಪ್ರಮುಖ ಪೆಟ್ರೋಲ್ ಬಂಕ್‌ಗಳಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶಾದ್ಯಂತ 69,000 ಪೆಟ್ರೋಲ್ ಬಂಕ್‌ಗಳಲ್ಲಿ ಇದೀಗ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಸಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಕೆಯಿಂದ ಇದೀಗ ದೇಶದ ಎಲೆಕ್ಟ್ರಿಕ್ ವಾಹನ ಮಾಲೀಕರ ಎದುರಾಗವು ಸಮಸ್ಯೆಗೆ ಪರಿಹಾರ ಸಿಗಲಿದೆ. ಶೀಘ್ರದಲ್ಲೇ ಚಾರ್ಜಿಂಗ್ ಸ್ಟೇಶನ್ ಅಳವಡಿಕೆ ನಡೆಯಲಿದೆ. ಆದರೆ ನಿಯಮಿತಿ ಅವಧಿಯಲ್ಲಿ ಪೂರ್ಣಗೊಳಿಸುವ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಇದರ ಜೊತೆಗೆ ಭಾರತವನ್ನು ಆಟೋಮೊಬೈಲ್ ಹಬ್ ಮಾಡುವುದಾಗಿ ಗಡ್ಕರಿ ಹೇಳಿದ್ದಾರೆ.

click me!