ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಆಟೋಮೊಬೈಲ್ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು ಹಾಗೂ ವಲಯಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರು ಮೇ 22: ಕರೋನಾ ಮಹಾಮಾರಿ ಹೆಚ್ಚು ಹರಡದಂತೆ ತಡೆಯಲು ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ತಿಳಿಸಿದರು.
ಕೈಗೆಟುಕವ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಬ್ಯಾಟ್‌ರೆ
ನಗರದ ಬಿಡದಿ ಹಾಗೂ ಹಾರೋಹಳ್ಳೀ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಗೆ ಹಾಗೂ ಹಾರೋಹಳ್ಳಿ ಕೈಗಾರಿಕಾ ಸಂಘಗಳ ಜೊತೆ ಮಾತನಾಡಿದರು. ಟಯೋಟಾ ಕಿರ್ಲೋಸ್ಕರ್ ಮೋಟಾರ್ಸ್‌ನಲ್ಲಿ ಕರೋನಾ ಮಹಾಮಾರಿ ಹರಡದಂತೆ ಕೈಗೊಂಡಿರುವ ಎಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಕರೋನಾ ಮಾಹಾಮಾರಿಯ ಮಧ್ಯೆ ಕೈಗಾರಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ಕೈಗಾರಿಕೆಗಳ ಪ್ರದೇಶಗಳಲ್ಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಕರೋನಾ ಮಹಾಮಾರಿಯನ್ನು ಹರಡದಂತೆ ತಡೆಗಟ್ಟಬಹುದಾಗಿದೆ ಎಂದು ಹೇಳಿದರು. ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಕೈಗಾರಿಕೆಗಳು ಕಾರ್ಯನಿರ್ವಹಿಸಬಹುದಾಗಿದೆ. ರಾಜ್ಯ ಸರಕಾರದ ವತಿಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಸಹಾಯವನ್ನು ಒದಗಿಸಲು ನಮ್ಮ ಇಲಾಖೆ ಸಿದ್ದವಾಗಿದೆ ಎಂದು ಹೇಳಿದರು.