ಭಾರತದ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು; ಮಹೀಂದ್ರ eKUV100 ಲಾಂಚ್!

By Suvarna News  |  First Published Feb 5, 2020, 5:19 PM IST

ಹ್ಯುಂಡೈ, ಎಂಜಿ, ಟಾಟಾ ಸೇರಿದಂತೆ ಹಲವು ಆಟೋಮೊಬೈಲ್ ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿವೆ. ಭಾರತದಲ್ಲಿ ಬಿಡುಗಡೆಯಾಗಿರುವ ಎಲ್ಲಾ ಎಲೆಕ್ಟ್ರಿಕ್ ಕಾರಿನ ಬೆಲೆ 10 ಲಕ್ಷ ರೂಪಾಯಿಗೂ ಹೆಚ್ಚು. ಇದೀಗ ಮಹೀಂದ್ರ KUV100 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದೆ. ನೂನತ ಕಾರು ಭಾರತದ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಅನ್ನೋ ದಾಖಲೆ ಬರಿದಿದೆ.


ನವದೆಹಲಿ(ಫೆ.05): ಭಾರತದಲ್ಲಿ ಎಲ್ಲಾ ಆಟೋಮೊಬೈಲ್ ಕಂಪನಿಗಳು ಎಲೆಕ್ಟ್ರಿಕ್  ಕಾರು ಬಿಡುಗಡೆ ಮಾಡುತ್ತಿವೆ. ಇದೀಗ ಮಹೀಂದ್ರ ಸರದಿ. ಮಹೀಂದ್ರ ಈಗಾಗಲೇ ಇ ವೆರಿಟೋ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದೆ. ಇದೀಗ ಮಹೀಂದ್ರ ಬಹುನಿರೀಕ್ಷಿತ KUV100 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಲಾಂಚ್, ಹ್ಯುಂಡೈ MGಗೆ ನಡುಕ!

Tap to resize

Latest Videos

undefined

ಅಟೋ ಎಕ್ಸ್ಪೋ 2020ರಲ್ಲಿ ನೂತನ ಕಾರು ಬಿಡುಗಡೆ ಮಾಡಲಾಗಿದೆ. ವಿಶೇಷ ಅಂದರೆ ಮಹೀಂದ್ರ KUV100 ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಲಭ್ಯವಿರುವ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಅನ್ನೋ ಹೆಗ್ಗಳಕಿಗೆ ಪಾತ್ರರಾಗಿದ್ದಾರೆ. ನೂತನ ಕಾರಿನ ಬೆಲೆ 8.25 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ).

ಇದನ್ನೂ ಓದಿ: ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್, SUV ಕಾರು ಅನಾವರಣಕ್ಕೆ ರೆಡಿ!

2018ರ ಅಟೋ ಎಕ್ಸ್ಪೋದಲ್ಲಿ ಅನಾವರಣ ಮಾಡಲಾಗಿದ್ದ ಮಹೀಂದ್ರ KUV100 ಎಲೆಕ್ಟ್ರಿಕ್ ಕಾರು ಇದೀಗ 2020ರ ಆಟೋ ಎಕ್ಸ್ಪೋದಲ್ಲಿ ಲಾಂಚ್ ಆಗಿದೆ. ನೂತನ ಕಾರು 40 kW ಮೋಟಾರ್ ಪವರ್ ಬಳಲಾಗಿದ್ದು, 53 bhp ಪವರ್ ಹಾಗೂ 120 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ. 

ಇದನ್ನೂ ಓದಿ: ಬಿಗ್‌ಬಾಸ್ ಶೈನ್ ಶೆಟ್ಟಿ ಗೆದ್ದ ಟಾಟಾ ಅಲ್ಟ್ರೋಝ್ ಕಾರಿನ ಬೆಲೆ, ವಿಶೇಷತೆ ಇಲ್ಲಿದೆ!

15.9 kWh ಲೀಥಿಯಂ ಐಯಾನ್ ಬ್ಯಾಟರಿ ಹೊಂದಿರುವ ಮಹೀಂದ್ರ  KUV100 ಎಲೆಕ್ಟ್ರಿಕ್ ಕಾರು ಸಂಪೂರ್ಣ ಚಾರ್ಜ್‌ಗೆ  120 km ಮೈಲೇಜ್ ನೀಡಲಿದೆ. ಫಾಸ್ಟ್ ಚಾರ್ಜಿಂಗ್ ಕೂಡ ಲಭ್ಯವಿದೆ. ಮಹೀಂದ್ರ  KUV100 ಎಲೆಕ್ಟ್ರಿಕ್ ಕಾರಿನ ಬೆನ್ನಲ್ಲೇ XUV300 ಎಲೆಕ್ಟ್ರಿಕ್ ಕಾರು ಕೂಡ ಬಿಡುಗಡೆಯಾಗಲಿದೆ. 
 

click me!