ಮಾರುತಿ ಸುಜುಕಿ ಸಂಸ್ಥೆ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ. ಇತರ ಕಾರುಗಳಿಗೆ ಹೋಲಿಸದರೆ ಈ ಕಾರಿನ ಬೆಲೆ ಕಡಿಮೆ. ಇಷ್ಟೇ ಅಲ್ಲ ಒಂದು ಬಾರಿ ಚಾರ್ಜ್ ಮಾಡಿದರೆ 200 ಕಿ.ಮಿ ರೇಂಜ್ ಪ್ರಯಾಣ ನೀಡಲಿದೆ. ಇಲ್ಲಿದೆ ನೂತನ ಎಲೆಕ್ಟ್ರಿಕ್ ಕಾರಿನ ವಿವರ.
ನವದೆಹಲಿ(ಫೆ.21): ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ದುಬಾರಿ. ಕಾರಣ ಎಲೆಕ್ಟ್ರಿಕ್ ಕಾರಿನ ಬ್ಯಾಟರಿ ಹಾಗೂ ಇತರ ಬಿಡಿಭಾಗಗಳು ಆಮದು ಮಾಡಿಕೊಳ್ಳಲೇ ಬೇಕು. ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರು ಜನಸಾಮಾನ್ಯರ ಕೈಗೆಟುಕುವಂತಿಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ಸಬ್ಸಡಿ, ಉಚಿತ ರಿಜಿಸ್ಟ್ರೇಶನ್ ಹಾಗೂ ರಸ್ತೆ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವುದು.
ಇದನ್ನೂ ಓದಿ: ಎಲೆಕ್ಟ್ರಿಕ್ ಕಾರು ಖರೀದಿಸುವವರಿಗೆ ಕೇಂದ್ರ ಸರ್ಕಾರ ನೀಡಲಿದೆ 50 ಸಾವಿರ ರೂ!
undefined
ಮಾರುತಿ ಸುಜುಕಿ, ಮಹಿಂದ್ರ, ಹ್ಯುಂಡೈ ಸೇರಿದಂತೆ ಹಲವು ಕಾರು ಕಂಪನಿಗಳು 2019 ಹಾಗೂ 2020ರಲ್ಲಿ ಎಲೆಕ್ಟ್ರಿಕ್ ಕಾರುಗಳನ್ನ ಬಿಡುಗಡೆ ಮಾಡಲಿದೆ. ಇದರಲ್ಲಿ ಮಾರುತಿ ಸುಜುಕಿ ಬಿಡುಗಡೆ ಮಾಡಲಿರುವ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರು ಅತೀ ಕಡಿಮೆಯ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಇದನ್ನೂ ಓದಿ: ರಿಜಿಸ್ಟ್ರೇಶನ್, ರೋಡ್ ಟ್ಯಾಕ್ಸ್ ಇಲ್ಲ- ಎಲೆಕ್ಟ್ರಿಕ್ ಕಾರಿಗೆ ಕೇಂದ್ರದ ಬಂಪರ್ ಗಿಫ್ಟ್!
ಮಾರುತಿ ಸುಜುಕಿ ಮೊದಲ ಎಲೆಕ್ಟ್ರಿಕ್ ಕಾರು ವ್ಯಾಗನ್ಆರ್ ಸರಿಸುಮಾರು 7 ಲಕ್ಷ ರೂಪಾಯಿಗೆ ಬಿಡುಗಡೆ ಮಾಡಲು ಮುಂದಾಗಿದೆ. ಇತರ ಕಾರುಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು. ಒಂದು ಬಾರಿ ಚಾರ್ಜ್ ಮಾಡಿದರೆ 200 ಕಿ.ಮೀ ರೇಂಜ್ ಪ್ರಯಾಣ ಮಾಡಬಹುದು.
ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಯೋಜನೆ- ಎಲೆಕ್ಟ್ರಿಕ್ ವಾಹನಕ್ಕೆ ಸುಲಭ ಸಾಲ!
40 ನಿಮಿಷ ಚಾರ್ಜ್ ಮಾಡಿದರೆ ಶೇಕಡಾ 75 ರಿಂದ 80 ಚಾರ್ಜ್ ಆಗಲಿದೆ. ಇದು 150 ರಿಂದ 160 ಕಿ.ಮೀ ರೇಂಜ್ ಪ್ರಯಾಣ ಮಾಡಲು ಸಾಧ್ಯವಾಗಲಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಇತರ ಎಲೆಕ್ಟ್ರಿಕ್ ಕಾರುಗಳಿಗೆ ಹೋಲಿಸಿದರೆ ಪ್ರಯಾಣದ ರೇಂಜ್ ಕಡಿಮೆ. ಆದರೆ 7 ಲಕ್ಷ ರೂಪಾಯಿಗೆ ಡೀಸೆಂಟ್ ರೇಂಜ್ ಪ್ರಯಾಣ ನೀಡಲಿದೆ.
ಇದನ್ನೂ ಓದಿ: ಸರ್ಕಾರಕ್ಕೆ ಎಲೆಕ್ಟ್ರಿಕ್ ಕಾರು ಹಸ್ತಾಂತರಿಸಿದ ಕಿಯಾ ಮೋಟಾರ್ಸ್!
ಕೇಂದ್ರ ಸರ್ಕಾರ ಶೀಘ್ರದಲ್ಲೇ ಪ್ರತಿ 25 ಕಿ.ಮೀಗೆ ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಮುಂದಾಗಿದೆ. ಹೀಗಾಗಿ ಹೈವೇ ಯಾಗಲಿ ನಗರ ಪ್ರದೇಶವಾಗಲಿ, ಹಳ್ಳಿಯಾಗಲಿ ಚಾರ್ಜಿಂಗ್ ಕಷ್ಟವಲ್ಲ. ಹೀಗಾಗಿ ಭಾರತದಲ್ಲಿ ಮಾರುತಿ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರು ಹೊಸ ಸಂಚಲನ ಸೃಷ್ಟಿಸಲಿದೆ ಅನ್ನೋ ಮಾತುಗಳು ಕೇಳಿಬಂದಿದೆ