ಹೊಸ ಟ್ರಾಫಿಕ್ ನಿಯಮ; ಹೊರಬಿತ್ತು ಕುತೂಹಲಕಾರಿ ಮಾಹಿತಿ!

By Web Desk  |  First Published Oct 2, 2019, 7:58 PM IST

ಹೊಸ ಟ್ರಾಫಿಕ್ ನಿಯಮಕ್ಕೆ ಪರ ವಿರೋಧಗಳಿವೆ. ಕೆಲವರು ದುಬಾರಿ ದಂಡ ಸರಿಯಲ್ಲ ಎಂದು ವಾದಿಸಿದ್ದಾರೆ. ಹಲವರು ಉತ್ತಮ ನಿರ್ಧಾರ ಎಂದು ಪ್ರಶಂಸಿದ್ದಾರೆ. ಇದೀಗ ಹೊಸ ಟ್ರಾಫಿಕ್ ನಿಯಮದಿಂದ ಉಲ್ಲಂಘನೆ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.


ನವದೆಹಲಿ(ಅ.02):  ಹೊಸ ಟ್ರಾಫಿಕ್ ನಿಯಮ ಹಾಗೂ ದುಬಾರಿ ದಂಡ ಭಾರತದಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ. ಕೆಲ ರಾಜ್ಯಗಳು ಹೊಸ ನಿಯಮ ಜಾರಿ ಮಾಡಿಲ್ಲ. ಆದರೆ ಹೆಚ್ಚಿನ ರಾಜ್ಯಗಳು ದುಬಾರಿ ದಂಡಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಹೀಗಾಗಿ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಮಾಣವೂ ಕಡಿಮೆಯಾಗಿದೆ.

ಇದನ್ನೂ ಓದಿ: 8 ವರ್ಷದ ಬಾಲಕನ ಬೈಕ್ ರೈಡ್; ತಂದೆಗೆ 30,000 ರೂ ದಂಡ!

Latest Videos

undefined

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ನಿಯಮ ಉಲ್ಲಂಘಿಸುವವರ ಸಂಖ್ಯೆ ಬರೋಬ್ಬರಿ 66% ಇಳಿಕೆಯಾಗಿದೆ. 2018ರ ಸೆಪ್ಟೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ 5,24,819 ಚಲನ್ ನೀಡಲಾಗಿತ್ತು. ಇದೀಗ 2019ರ ಸೆಪ್ಟೆಂಬರ್ ತಿಂಗಳಲ್ಲಿ ಈ ಪ್ರಮಾಣ 1,73,921ಕ್ಕೆ ಇಳಿದಿದೆ.

ಇದನ್ನೂ ಓದಿ: ಬರೋಬ್ಬರಿ 2 ಲಕ್ಷ ರೂಪಾಯಿ ದಂಡ; ಫೈನ್ ನೋಡಿ ಚಾಲಕ ಕಂಗಾಲು!

ಸೆಪ್ಟೆಂಬರ್ 2018ರಲ್ಲಿ ಓವರ್ ಸ್ಪೀಡ್‌ ನಿಯಮ ಉಲ್ಲಂಘಿಸಿದ ಕಾರಣಕ್ಕೆ 13,281 ಚಲನ್ ನೀಡಲಾಗಿತ್ತು. ಿದೀಗ 2019ರ ಸೆಪ್ಟೆಂಬರ್ ತಿಂಗಳಲ್ಲಿ  3,366 ಚಲನ್ ನೀಡಲಾಗಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ದ್ವಿಚಕ್ರವಾಹನದಲ್ಲಿ ಮೂವರು ಪ್ರಯಾಣಿಸಿದ ಕಾರಣಕ್ಕೆ 15,261 ಮಂದಿ ಮೇಲೆ ಪ್ರಕರಣ ದಾಖಲಾಗಿತ್ತು. ಈ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ 1,853ಕ್ಕೆ ಇಳಿದಿದೆ.

ಇದನ್ನೂ ಓದಿ: 2 ಆ್ಯಪ್ ನಿಮ್ಮಲ್ಲಿದ್ದರೆ, ದುಬಾರಿ ದಂಡದಿಂದ ಬಚಾವ್!

2018ರ ಸೆಪ್ಟೆಂಬರ್‌ನಲ್ಲಿ ಹೆಲ್ಮೆಟ್ ರಹಿತ ಪ್ರಯಾಣಕ್ಕೆ 1,04,522 ಪ್ರಕರಣ ದಾಖಲಾಗಿತ್ತು. ಇದು 2019ರ ಸೆಪ್ಟೆಂಬರ್ ತಿಂಗಳಲ್ಲಿ 21,154 ಕ್ಕೆ ಇಳಿದಿದೆ. ಡ್ರಿಂಕ್ ಅಂಡ್ ಡ್ರೈವ್, ಸಿಗ್ನಲ್ ಜಂಪ್ ಸೇರಿದಂತೆ ಎಲ್ಲಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. 

click me!