ಶೀಘ್ರದಲ್ಲೇ ಕಡಿಮೆ ಬೆಲೆಯ KRIDN ಎಲೆಕ್ಟ್ರಿಕ್ ಬೈಕ್ ಬಿಡುಗಡೆ!

By Suvarna News  |  First Published Sep 13, 2020, 3:38 PM IST

ಭಾರತದಲ್ಲಿ ಎಲೆಕ್ಟ್ರಿಕ್ ವಾಹನದಲ್ಲಿ ಭಾರಿ ಪೈಪೋಟಿ ಏರ್ಪಡುತ್ತಿದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಪ್ರತಿ ದಿನ ಹೊಸ ಹೊಸ ಸ್ಟಾರ್ಟ್ ಅಪ್ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಆರಂಭಿಸುತ್ತಿದೆ. ಇದೀಗ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌ಗೆ ಪ್ರತಿಸ್ಪರ್ಧಿಯಾಗಿ ಒನ್ ಎಲೆಕ್ಟ್ರಿಕ್ ಮೋಟರ್‌ಸೈಕಲ್ ಕಂಪನಿ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡುತ್ತಿದೆ.


ನವದೆಹಲಿ(ಸೆ.13): ಮೇಡ್ ಇನ್ ಇಂಡಿಯಾ KRIDN ಎಲೆಕ್ಟ್ರಿಕ್ ಬೈಕ್ ಮುಂದಿನ ತಿಂಗಳ ಆರಂಭದಲ್ಲಿ ಬಿಡುಗಡೆಯಾಗುತ್ತಿದೆ. ಒನ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಸ್ಟಾರ್ಟ್ ಆಪ್ ಕಂಪನಿ ನೂತನ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡುತ್ತಿದೆ. ಸದ್ಯ ಭಾರತದಲ್ಲಿ ಹಲವು ಎಲೆಕ್ಟ್ರಿಕ್ ಸ್ಕೂಟರ್ ಲಭ್ಯವಿದೆ. ಆದರೆ ಎಲೆಕ್ಟ್ರಿಕ್ ಬೈಕ್ ಪೈಕ್ ರಿವೋಲ್ಟ್ ಬೈಕ್ ಮಾತ್ರ ಲಭ್ಯವಿದೆ. ಇದೀಗ ರಿವೋಲ್ಟ್‌ಗೆ ಪ್ರತಿಸ್ಪರ್ಧಿಯಾಗಿ KRIDN ಬೈಕ್ ಬಿಡುಗಡೆಯಾಗುತ್ತಿದೆ.

ಭಾರತದಲ್ಲಿ ಸಂಚಲನ ಮೂಡಿಸಿದ ಮೇಡ್ ಇನ್ ಇಂಡಿಯಾ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್

Latest Videos

undefined

KRIDN ಎಲಕ್ಟ್ರಿಕ್ ಬೈಕ್ ಆರಂಭಿಕ ಹಂತದಲ್ಲಿ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ ಚೈನ್ನೆ ನಗರಗಳಲ್ಲಿ ಬಿಡುಗಡೆಯಾಗಲಿದೆ. ಬಳಿಕ ಇತರ ನಗರಗಳಿಗೆ ವಿಸ್ತರಣೆಯಾಗಲಿದೆ. ನೂತನ ಎಲೆಕ್ಟ್ರಿಕ್ ಸ್ಕೂಟರ್ ಬೈಕ್ ಗರಿಷ್ಠ ವೇಗ 95 ಕಿ.ಮೀ ಎಂದು ಹೇಳಲಾಗುತ್ತಿದೆ. ಇಷ್ಟೇ ಸಂಪೂರ್ಣ ಚಾರ್ಜ್‌ಗೆ 110 ಕಿ.ಮೀ ಮೈಲೇಜ್ ನೀಡಲಿದೆ. 

ಬಲಿಷ್ಠ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಿರುವ KRIDN ಎಲೆಕ್ಟ್ರಿಕ್ ಬೈಕ್ 165 nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ. ಹೀಗಾಗಿ 60 ಕಿ.ಮೀ ವೇಗವನ್ನು 8 ಸೆಕೆಂಡ್‌ಗಳಲ್ಲಿ ತಲುಪಲಿದೆ. ಸಂಪೂರ್ಣ ಚಾರ್ಜ್ ಆಗಲು 4 ರಿಂದ 5 ಗಂಟೆ ಸಮಯ ತೆಗೆದುಕೊಳ್ಳುತ್ತದೆ.

KRIDN ಎಲೆಕ್ಟ್ರಿಕ್ ಬೈಕ್ ಬೆಲೆ 1 ಲಕ್ಷ ರೂಪಾಯಿ ಒಳಗಿರಲಿದೆ ಎಂದು ಒನ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಸ್ಟಾರ್ಟ್ ಅಪ್ ಕಂಪನಿ ಹೇಳಿತ್ತು. ಇದೀಗ 1.20 ಲಕ್ಷ ರೂಪಾಯಿ ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.  ಇದರ ಬೆನ್ನಲ್ಲೇ ಮತ್ತೆರೆಡು ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದೆ.

click me!