ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರು ರೋಡ್ ಟೆಸ್ಟ್ ಯಶಸ್ವಿ- ಶೀಘ್ರದಲ್ಲಿ ಬಿಡುಗಡೆ!

By Web DeskFirst Published Feb 16, 2019, 2:11 PM IST
Highlights

ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗಿದೆ. ನೂತನ ಕ್ವಿಡ್ ಎಲೆಕ್ಟ್ರಿಕ್ ಕಾರು 250 ಕಿ.ಮೀ ಮೈಲೇಜ್ ನೀಡಲಿದೆ. ಕಾರಿನ ಬೆಲೆ, ವಿಶೇಷತೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ನವದೆಹಲಿ(ಫೆ.16): ಸಣ್ಣ ಕಾರಿನಲ್ಲಿ ಕ್ರಾಂತಿ ಮಾಡಿರುವ ರೆನಾಲ್ಟ್ ಕ್ವಿಡ್ ಹೊಸ ಅವತಾರದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಕ್ವಿಡ್ ಎಲೆಕ್ಟ್ರಿಕ್ ಕಾರು ಶೀಘ್ರದಲ್ಲೇ ರಸ್ತೆಗಿಳಿಯಲಿದೆ. ರೋಡ್ ಟೆಸ್ಟ್ ಯಶಸ್ವಿಯಾಗಿ ಪೂರೈಸಿರುವ ಕ್ವಿಡ್ ಎಲೆಕ್ಟ್ರಿಕ್ ಕಾರು ಇದೇ ವರ್ಷ ಚೀನಾದಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಕೆಟ್ಟು ನಿಂತ ಭಾರತದ ಅತಿ ವೇಗದ ರೈಲು: ಏನಾಗಿತ್ತು?

ವಿಶೇಷ ಅಂದರೆ ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರು ಉತ್ಪಾದನೆಯಾಗುತ್ತಿರುವುದು ಭಾರತದಲ್ಲಿ. ಮೊದಲು ಚೀನಾದಲ್ಲಿ ಈ ಕಾರು ಬಿಡುಗಡೆಯಾಗಲಿದ್ದು, 2020ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.  ನೂತನ ಕ್ವಿಡ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 250 ಕಿ.ಮೀ ಪ್ರಯಾಣ ಮಾಡಬುಹುದು ಎಂದು ರೆನಾಲ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಪಾಳು ಬಿದ್ದಿದ್ದ ಭಾರತದ ಮೊಟ್ಟ ಮೊದಲ ಮಾರುತಿ ಕಾರಿಗೆ ಮರು ಜೀವ!

2018ರ ಪ್ಯಾರಿಸ್ ಮೋಟಾರ್ ಶೋನಲ್ಲಿ ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರು ಪರಿಚಯಿಸಲಾಗಿತ್ತು. ಬಳಿಕ ನಿರ್ಮಾಣ ಕಾರ್ಯದಲ್ಲಿ ತೊಡಗಿ ರೆನಾಲ್ಟ್ ಕ್ವಿಡ್ ಇದೀಗ ರೋಡ್ ಟೆಸ್ಟ್ ಸೇರಿದಂತೆ ಇತರ ಪರೀಕ್ಷೆಗಳನ್ನ ಪೂರೈಸುತ್ತಿದೆ. ಇದರ ಬೆಲೆ 6 ರಿಂದ 9 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರಿಗಿಂತ ಮೊದಲು ಮಾರುತಿ ಸುಜುಕಿ ವ್ಯಾಗನ್ಆರ್, ಟಾಟಾ ಟಿಯಾಗೋ, ಹ್ಯುಂಡೈ ಕೋನಾ ಸೇರಿದಂತೆ ಹಲವು ಎಲೆಕ್ಟ್ರಿಕ್ ಕಾರುಗಳು ಈ ವರ್ಷ ಬಿಡುಗಡೆಯಾಗಲಿದೆ.


 

click me!