2019ರ ಜೂನ್‌--ಜುಲೈನಲ್ಲಿ ಬಿಡುಗಡೆಯಾಗುತ್ತಿದೆ 4 ಕಾರು- ಇಲ್ಲಿದೆ ವಿವರ!

Published : May 25, 2019, 08:45 PM IST
2019ರ ಜೂನ್‌--ಜುಲೈನಲ್ಲಿ ಬಿಡುಗಡೆಯಾಗುತ್ತಿದೆ 4 ಕಾರು- ಇಲ್ಲಿದೆ ವಿವರ!

ಸಾರಾಂಶ

ಜೂನ್ -ಜುಲೈ ತಿಂಗಳಲ್ಲಿ ಪ್ರಮುಖ 4 ಕಾರುಗಳು ಬಿಡುಗಡೆಯಾಗುತ್ತಿದೆ. 2 ಕಾರುಗಳು ಇದೇ ಮೊದಲ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಇಲ್ಲಿದೆ ಕಾರುಗಳ ವಿವರ.

ನವದೆಹಲಿ(ಮೇ.25): ಪ್ರಸಕ್ತ ವರ್ಷದಲ್ಲಿ ಈಗಾಗಲೇ ಹಲವು ಕಾರುಗಳು ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಹ್ಯುಂಡೈ ವೆನ್ಯೂ ಕಾರು ಮಾರುಕಟ್ಟೆ ಪ್ರವೇಶಿಸಿದೆ. ಇದೀಗ ಬಹುನಿರೀಕ್ಷಿತ 4 ಕಾರುಗಳು ಜೂನ್‌ನಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ MG ಮೋಟಾರ್ಸ್, ಕಿಯಾ ಮೋಟಾರ್ಸ್ ಕಾರು ಬಿಡುಗಡೆ ಮಾಡುತ್ತಿದೆ. ಇನ್ನು ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಆಗಿ ಬಿಡುಗಡೆಯಾಗುತ್ತಿದೆ.

MG ಹೆಕ್ಟರ್


ಬ್ರಿಟೀಷ್ ಮೂಲದ MG ಮೋಟಾರ್ಸ್ ಭಾರತದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರು MG ಹೆಕ್ಟರ್ SUV ಕಾರು ಬಿಡುಗಡೆ ಮಾಡುತ್ತಿದೆ. ಜೂನ್‌ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ.

ಕಿಯಾ ಟಸ್ಕರ್


ಸೌಥ್ ಕೋರಿಯಾ ಮೂಲದ ಕಿಯಾ ಮೋಟಾರ್ಸ್ ಇದೀಗ ಟಸ್ಕರ್ ಕಾರು ಬಿಡುಗಡೆ ಮಾಡುತ್ತಿದೆ. 1.6 ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಕಾರು ಬಿಡುಗಡೆಯಾಗುತ್ತಿದೆ.

ರೆನಾಲ್ಟ್ ಟ್ರೈಬರ್


ಮಾರುತಿ ಎರ್ಟಿಗಾ ಕಾರಿಗೆ ಪ್ರತಿಸ್ಪರ್ಧಿಯಾಗಿ 7 ಸೀಟರ್ ರೆನಾಲ್ಟ್ ಟ್ರೈಬರ್ ಕಾರು ಬಿಡುಗಡೆಯಾಗುತ್ತಿದೆ.  

ಟೊಯೊಟಾ ಗ್ಲಾಂಝಾ


ಮಾರುತಿ ಬಲೆನೊ ಇದೀಗ ಟೊಯೊಟಾ ಗ್ಲಾಂಝಾ ಕಾರಾಗಿ ಬಿಡುಗಡೆಯಾಗುತ್ತಿದೆ. ಆರಂಭಿಕ ಹಂತದಲ್ಲೇ ಪೆಟ್ರೋಲ್ ಎಂಜಿನ್ ಮಾತ್ರ ಬಿಡುಗಡೆಯಾಗುತ್ತಿದೆ.
 

PREV
click me!

Recommended Stories

ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ
ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ