ಹೆಚ್ಚು ಮೈಲೇಜ್, ಕಡಿಮೆ ಬೆಲೆ; ಟಾಟಾ ಬಿಡುಗಡೆ ಮಾಡಿದೆ ಹೊಸ ಕಾರು!

By Web Desk  |  First Published Oct 9, 2019, 4:02 PM IST

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರು ಹೆಚ್ಚುವರಿ ಫೀಚರ್ಸ್‌ನೊಂದಿಗೆ ಬಿಡುಗಡೆಯಾಗಿದೆ. ಭಾರತದ ಲಭ್ಯವಿರುವ ಕಡಿಮೆ ಬೆಲೆಯ ಸೆಡಾನ್ ಎಲೆಕ್ಟ್ರಿಕ್ ಕಾರು ಅನ್ನೋ ಹೆಗ್ಗಳಿಕೆಗೆ ಟಿಗೋರ್ ಪಾತ್ರವಾಗಿದೆ. ಟಿಗೋರ್ ಎಲೆಕ್ಟ್ರಿಕ್ ಕಾರಿನ ಹೆಚ್ಚಿನ ವಿವರ ಇಲ್ಲಿದೆ.


ನವದೆಹಲಿ(ಅ.09): ಟಾಟಾ ಮೋಟಾರ್ಸ್ ಕಂಪನಿಯ ಟಿಗೋರ್ ಎಲೆಕ್ಟ್ರಿಕ್ ಕಾರು ಇದೀಗ ಹೆಚ್ಚುವರಿ ಮೈಲೇಜ್ ರೇಂಜ್‌ನೊಂದಿಗೆ ಬಿಡುಗಡೆಯಾಗಿದೆ. ಈಗಾಗಲೇ ಟಿಗೋರ್ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿದೆ. ಆದರೆ ನೂತನ ಕಾರು ಕೆಲ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ಕೇಂದ್ರ ಸರ್ಕಾರದ ಸಬ್ಸಿಡಿ, FAME II ಯೋಜನೆಯ ರಿಯಾಯಿತಿ ಬಳಿಕ ಈ ಕಾರಿನ ಬೆಲೆ 9.44 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ ದೆಹಲಿ).

ಇದನ್ನೂ ಓದಿ: ಬೆಂಗಳೂರು ಲಾಯರ್ ಹೊಸ ಐಡಿಯಾ; ಕಾರಿನ ಮೇಲೆ ಮಿನಿ ಗಾರ್ಡನ್!

Tap to resize

Latest Videos

undefined

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನಲ್ಲಿ 3 ವೇರಿಯೆಂಟ್ ಲಭ್ಯವಿದೆ.  XE+, XM+ ಹಾಗೂ XT+ ವೇರಿಯೆಂಟ್ ಲಭ್ಯವಿದೆ. ನೂತನ ಟಿಗೋರ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 213 ಕಿ.ಮೀ ಪ್ರಯಾಣದ ರೇಂಜ್ ನೀಡಲಿದೆ. ಇದು ಹಳೇ ಟಿಗೋರ್ ಎಲೆಕ್ಟ್ರಿಕ್ ಕಾರಿಗಿಂತ 71 ಕಿ.ಮೀ ಹೆಚ್ಚಿನ ಮೈಲೇಜ್ ನೀಡಲಿದೆ.

ಇದನ್ನೂ ಓದಿ: ಟಾಟಾ ಟಿಯಾಗೋ Wizz ಕಾರು ಲಾಂಚ್; ಬೆಲೆ ಕೇವಲ 5.40 ಲಕ್ಷ!

ನೂತನ ಟಿಗೋರ್ ಎಲೆಕ್ಟ್ರಿಕ್ ಕಾರು 3 ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ಬಿಳಿ, ಈಜಿಪ್ಟ್ ಬ್ಲೂ ಹಾಗೂ ರೋಮನ್ ಸಿಲ್ವರ್ ಆಯ್ಕೆ ಅವಕಾಶವಿದೆ. 1.25 ಲಕ್ಷ ಕಿ.ಮೀ ಅಥವಾ 3 ವರ್ಷ ವಾರೆಂಟಿಯನ್ನು ಟಾಟಾ ಮೋಟಾರ್ಸ್ ನೀಡುತ್ತಿದೆ. ಬೆಂಗಳೂರು ಸೇರಿದಂತೆ ದೇಶದ 30  ಪ್ರಮುಖ ನಗರಗಳಲ್ಲಿ ಟಿಗೋರ್ ಎಲೆಕ್ಟ್ರಿಕ್ ಕಾರು ಲಭ್ಯವಿದೆ.

ಅಕ್ಟೋಬರ್ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

click me!