ಶೀಘ್ರದಲ್ಲೇ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು; 300KM ಮೈಲೇಜ್!

By Web Desk  |  First Published Oct 3, 2019, 7:19 PM IST

ಭಾರತದ ಗರಿಷ್ಠ ಸುರಕ್ಷತೆಯ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಟಾಟಾ ನೆಕ್ಸಾನ್ ಕಾರು ಇದೀಗ ಎಲೆಕ್ಟ್ರಿಕ್ ಕಾರಾಗಿ ಬಿಡುಗಡೆಯಾಗುತ್ತಿದೆ. ಜನವರಿಯಲ್ಲಿ ನೂತನ ಕಾರು ಬಿಡುಗಡೆಯಾಗಲಿದೆ. ಈ ಕಾರಿನ ವಿವರ ಇಲ್ಲಿದೆ.


ನವದೆಹಲಿ(ಅ.03): ವಿಶ್ವವೇ ಈಗ ಎಲೆಕ್ಟ್ರಿಕ್ ವಾಹನದ ಮೊರೆ ಹೋಗಿದೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ. 2019ರಲ್ಲಿ ಈಗಾಗಲೇ ಹಲವು ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಬಿಡುಗಡೆಯಾಗಿದೆ. 2020ರಲ್ಲಿ ಬಹುತೇಕ ಎಲ್ಲಾ ಕಾರು ಕಂಪನಿಗಳು ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡಲಿದೆ. ಇದೀಗ ಟಾಟಾ ಮೋಟಾರ್ಸ್ 2020ರ ಆರಂಭದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ:  ಭಾರತದ 200 ಟಾಟಾ ಕಾರು ಖರೀದಿಸಿದ ಬಾಂಗ್ಲಾದೇಶ ಸೇನೆ!

Latest Videos

undefined

ಟಾಟಾ ಮೋಟಾರ್ಸ್ ಕಾರುಗಳ ಪೈಕಿ ಟಾಟಾ ನೆಕ್ಸಾನ್ ಕಾರು ಮಾರಾಟದಲ್ಲಿ ದಾಖಲೆ ಬರೆದಿದೆ. ಭಾರತದ ಗರಿಷ್ಠ ಸುರಕ್ಷತೆಯ ಕಾರು ಅನ್ನೋ ಹೆಗ್ಗಳಿಕೆಗೂ ಪಾತ್ರವಾಗಿದೆ. ಇದೀಗ ಇದೇ ಕಾರು ಎಲೆಕ್ಟ್ರಿಕ್ ಕಾರಾಗಿ ಬಿಡುಗಡೆಯಾಗಲಿದೆ. 2020ರ ಜನವರಿಯಲ್ಲಿ ನೂಟನ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಭಾರತದ ಮಾರುಕಟ್ಟೆ ಪ್ರವೇಶಿಸಲಿದೆ. 

ಇದನ್ನೂ ಓದಿ: ಟಾಟಾ ಅಲ್ಟ್ರೋಝ್ ಕಾರಿನ ಟೀಸರ್ ರಿಲೀಸ್-ಮಾರುತಿ ಬಲೆನೋ, ಐ20ಗೆ ಪೈಪೋಟಿ!

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 300 ಕಿ.ಮಿ ಮೈಲೇಜ್ ರೇಂಜ್ ನೀಡಲಿದೆ ಎಂದು ಕಂಪನಿ ಹೇಳಿದೆ. ಈ ಕಾರಿನ ಬೆಲೆ 15 ರಿಂದ 17 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಟಾಟಾ ಮೋಟಾರ್ಸ್ ಕಂಪನಿಯ ಟಾಟಾ ಟಿಗೋರ್ ಸೆಡಾನ್  ಎಲೆಕ್ಟ್ರಿಕ್ ಕಾರು ಈಗಾಗಲೇ ಮಾರುಕಟ್ಟೆಯಲ್ಲಿದೆ. 
 

click me!