ಮೇ ತಿಂಗಳ ವಾಹನ ತೆರಿಗೆ ವಿನಾಯ್ತಿ : ಯಾರಿಗೆ ಅನ್ವಯ?

By Kannadaprabha News  |  First Published May 30, 2021, 7:20 AM IST
  • ಸೆಮಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನಗಳ ಸಂಚಾರಕ್ಕೆ ಸರ್ಕಾರ ನಿರ್ಬಂಧ 
  • ಮೇ ತಿಂಗಳಿಗೆ ಅನ್ವಯಿಸುವಂತೆ ವಾಹನ ತೆರಿಗೆ ವಿನಾಯಿತಿ
  • ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ  ಮಾಹಿತಿ

ಬೆಂಗಳೂರು (ಮೇ.30): ಸೆಮಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನಗಳ ಸಂಚಾರಕ್ಕೆ ಸರ್ಕಾರ ನಿರ್ಬಂಧ ವಿಧಿಸಿರುವುದರಿಂದ ಆ ವಾಹನಗಳಿಗೆ ಮೇ ತಿಂಗಳಿಗೆ ಅನ್ವಯಿಸುವಂತೆ ವಾಹನ ತೆರಿಗೆ ವಿನಾಯಿತಿ ನೀಡಿ ಆದೇಶಿಸಲಾಗಿದೆ. 

ಸರ್ಕಾರ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧ ವಿ​ಧಿಸಿ ಆದೇಶಿಸಿರುವುದರಿಂದ ಅಂತಹ ವಾಹನಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದರು. ಅವರು ತೆರಿಗೆ ವಿನಾಯಿತಿ ನೀಡಲು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು. 

Latest Videos

undefined

ಕೊರೋನಾ ಸಂಕಷ್ಟದಲ್ಲಿ ನೆರವು; ಟಾಟಾ ವಾಣಿಜ್ಯ ವಾಹನ ಗ್ರಾಹಕರಿಗೆ ಬಂಪರ್ ಕೊಡುಗೆ!

ಸರ್ಕಾರ ಅವರ ಮನವಿ ಪರಿಗಣಿಸಿದೆ. ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯಡಿ ಪ್ರದತ್ತವಾದ ಅಧಿ​ಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೋಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ ತಿಂಗಳಿಗೆ ಮಾತ್ರ ಅನ್ವಯಿಸಿ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!