ಇನೋವಾ ಕಾರಿಗೆ ಪೈಪೋಟಿ- ಬರುತ್ತಿದೆ ಕಡಿಮೆ ಬೆಲೆಯ ರೆನಾಲ್ಟ್ RBC ಕಾರು!

By Web Desk  |  First Published Mar 19, 2019, 8:24 PM IST

ರೆನಾಲ್ಟ್ ಕ್ವಿಡ್ ಕಾರು ಭಾರತದಲ್ಲಿ ಗರಿಷ್ಠ ಮಾರಾಟ ದಾಖಲೆ ಹೊಂದಿದೆ. ಇದರ ಬೆನ್ನಲ್ಲೇ ಕಡಿಮೆ ಬೆಲೆಯ 7 ಸೀಟಿನ ಕಾರು ರೆನಾಲ್ಟ್ ಕಾರು ಬಿಡುಗಡೆಯಾಗುತ್ತಿದೆ. ಟೊಯೊಟಾ ಇನೋವಾ, ಮಾರುತಿ ಎರ್ಟಿಗಾ ಕಾರಿಗೆ ಪೈಪೋಟಿ ನೀಡಲು ರೆನಾಲ್ಟ್ ಈ ಕಾರನ್ನು ಬಿಡುಗಡೆ ಮಾಡುತ್ತಿದೆ.
 


ನವದೆಹಲಿ(ಮಾ.19): ರೆನಾಲ್ಟ್ ಕ್ವಿಡ್ ಕಾರು ಭಾರತಲ್ಲಿ ಗ್ರಾಹಕರನ್ನು ಮೋಡಿ ಮಾಡಿದೆ. ಇದೀಗ ಇದೇ ರೀತಿ ಕಡಿಮೆ ಬೆಲೆಯಲ್ಲಿ 7 ಸೀಟಿನ ಕಾರು ಬಿಡುಗಡೆ ಮಾಡಲು ರೆನಾಲ್ಟ್ ರೆಡಿಯಾಗಿದೆ. ಈ ಮೂಲಕ  ಟೊಯೊಟಾ ಇನೋವಾ, ಮಾರುಟಿ ಎರ್ಟಿಗಾ ಕಾರಿಗೆ ಪೈಪೋಟಿ ನೀಡಲು ಸಜ್ಜಾಗಿದೆ. ವಿಶೇಷ ಅಂದರೆ ಕ್ವಿಡ್ ರೀತಿಯಲ್ಲೇ ಕಡಿಮೆ ಬೆಲೆ ಹಾಗೂ ಗರಿಷ್ಠ ಸದಪಯೋಗದ ಕಾರು ಇದಾಗಲಿದೆ ಎಂದು ಕಂಪೆನಿ ಹೇಳಿದೆ.

ಇದನ್ನೂ ಓದಿ: ಟಾಟಾ ನ್ಯಾನೋ ಬದಲು ಬರುತ್ತಿದೆ ಹೊಸ ಸಬ್-ಟಿಯಾಗೋ ಕಾರು!

Tap to resize

Latest Videos

undefined

ರೆನಾಲ್ಟ್ RBC ಕಾರಿನ ಬೆಲೆ ಕೇವಲ 5.5 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ). ಇದು ಭಾರತದಲ್ಲಿರುವ ಅತ್ಯಂತ ಕಡಿಮೆ ಬೆಲೆಯ MPV ಕಾರು.  ಜುಲೈನಲ್ಲಿ ಈ ಕಾರು ಬಿಡುಗಡೆಯಾಗಲಿದೆ. ಅತ್ಯುತ್ತಮ ಗುಣಮಟ್ಟ, ಮೈಲೇಜ್ ಹಾಗೂ ಗರಿಷ್ಠ ಸುರಕ್ಷತೆ ನೀಡಲಿದೆ ಎಂದು ಕಂಪನಿ ಹೇಳಿದೆ.

ಇದನ್ನೂ ಓದಿ: ಜೀಪ್ ಕಂಪಾಸ್, ಟಾಟಾ ಹ್ಯಾರಿಯರ್, ಮಹೀಂದ್ರ XUV500- ಮೊದಲ ಸ್ಥಾನ ಯಾರಿಗೆ?

ನೂತನ ಕಾರಿನ ಎಂಜಿನ್ ಪವರ್ ಕುರಿತು ಕಂಪನಿ ಯಾವುದೇ ಮಾಹಿತಿ ಬಹಿರಂಗ  ಪಡಿಸಿಲ್ಲ. ಆದರೆ  1.0 ಲೀಟರ್ ಟರ್ಬೋ ಚಾರ್ಜಡ್ ಪೆಟ್ರೋಲ್ ಎಂಜಿನ್ ಹಾಗೂ 1.2 ಲೀಟರ್ ಪೆಟ್ರೋಲ್ ಎಂಜಿನ್ ವೇರಿಯೆಂಟ್ ಲಭ್ಯವಿದೆ. ಇನ್ನು AMT (ಅಟೋಮ್ಯಾಟಿಕ್ ಟ್ರಾನ್ಸಮಿಶನ್) ಹೊಂದಿರಲಿದೆ. BS-VI ಎಮಿಶನ್ ನಿಯಮ ಕೂಡ ಪಾಲಿಸಲಿದೆ.

click me!