ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ಟೊಯೋಟಾ ಕಿರ್ಲೋಸ್ಕರ್!

Suvarna News   | Asianet News
Published : Apr 18, 2020, 03:28 PM IST
ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ಟೊಯೋಟಾ ಕಿರ್ಲೋಸ್ಕರ್!

ಸಾರಾಂಶ

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಈಗಾಗಲೇ ಸರ್ಕಾರದ ಜೊತೆ ಕೈಜೋಡಿಸಿರುವ ಟೊಯೋಟಾ ಕಿರ್ಲೋಸ್ಕರ್ ಇದೀಗ ಮತ್ತೆ ಮಹತ್ವದ ಹೆಜ್ಜೆ ಇಟ್ಟಿದೆ. ಇತ್ತೀಚೆಗ ಆಸ್ಪತ್ರೆ ಸಿಬ್ಬಂದಿಗಳಿಗೆ ವಾಹನ ಸೇವೆ ನೀಡಿದ ಟೊಯೋಟಾ ಕಿರ್ಲೋಸ್ಕರ್ ಇದೀಗ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದೆ. 

ಬೆಂಗಳೂರು(ಏ.18):  ಕೋವಿಡ್-19 ಸೋಂಕು ನಿಯಂತ್ರಣ ಹೋರಾಟಕ್ಕೆ ನೆರವು ನೀಡುವುದನ್ನು ಮುಂದುವರೆಸಿರುವ ಟೊಯೋಟಾ ಕಿರ್ಲೋಸ್ಕರ್ ಇದೀಗ ಮುಖ್ಯಮಂತ್ರಿ ಪರಿಹಾರ ನಿಧಿಗೆ ಮತ್ತು ಸಂಕಷ್ಟದಲ್ಲಿರುವ ಬಡ ಜನರ ಜೀವನ ಪುನರುಜ್ಜೀವನಕ್ಕೆ ನೆರವಾಗಲು ಮುಂದಾಗಿದೆ. ಇದಕ್ಕಾಗಿ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 2 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದೆ.

ಕೊರೋನಾ ಹೋರಾಟಕ್ಕೆ ಮತ್ತಷ್ಟು ನೆರವು; ಆರೋಗ್ಯ ಇಲಾಖೆ ಜೊತೆ ಕೈಜೋಡಿಸಿದ ಟೊಯೋಟಾ ಕಿರ್ಲೋಸ್ಕರ್!

ಎರಡು ಕೋಟಿ ದೇಣಿಗೆ ಪೈಕಿ ರೂ. 1,35,48,553 ರೂಪಾಯಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ದೇಣಿಗೆಯಾಗಿದ್ದು, ಇದನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ  ನೀಡಲಾಗಿದೆ, ಉಳಿದ ರೂ.64,51,447 ರೂಪಾಯಿ ನೌಕರರಿಂದ ಸಂಗ್ರಹಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ.

ಈ ವೇಳೆ ಮಾತನಾಡಿದ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ  ಶೇಖರ್ ವಿಶ್ವನಾಥನ್, ಕೋವಿಡ್ -19 ಬಿಕ್ಕಟ್ಟಿನ ಸಮಯದಲ್ಲಿ ಟೊಯೋಟಾ ಸಂಪೂರ್ಣವಾಗಿ ಸರ್ಕಾರದ ಬೆಂಬಲಕ್ಕೆ ನಿಂತಿದೆ.  ಈ ಸಾಂಕ್ರಾಮಿಕ ರೋಗವನ್ನು ನಿವಾರಿಸಲು ಸಮುದಾಯಕ್ಕೆ ಅಗತ್ಯ ನೆರವು ನೀಡುವ ಮಾವವೀಯತೆಯ ಬದ್ಧತೆಯೊಂದಿಗೆ ಟಿಕೆಎಂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ರ್ಣಾಯಕ ಮತ್ತು ಪೂರ್ವಭಾವಿ ಕ್ರಮಗಳಿಗೆ ಬೆಂಬಲವಾಗಿ ನಿಲ್ಲಲಿದೆ. ಶೀಘ್ರದಲ್ಲೆ ಬಿಕ್ಕಟ್ಟಿನ ಸಮಯ ನಿವಾರಣೆಯಾಗಿ ದೇಶ ಸಹಜ ಸ್ಥಿತಿಗೆ ಮರಳಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಟೊಯೋಟಾ ಇನ್ನೋವಾ ಕ್ರಿಸ್ಟಾ ಲೀಡರ್‌ಶಿಪ್ ಆವೃತ್ತಿ; ಈ ಕಾರಿಗೆ ಸರಿಸಾಟಿ ಇಲ್ಲ!.

ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡಾಗಿನಿಂದ ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದು, ಸಮುದಾಯ ಮತ್ತು ಸರ್ಕಾರದ ಅಗತ್ಯತೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದೆ. ಸಂಸ್ಥೆ ಯಾವಾಗಲು ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಾಗಿ ನಿಲ್ಲಲಿದೆ. ಹಾಗೂ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲಿದೆ ಎಂದರು. 

ಜೊತೆಗೆ ಸಂಸ್ಥೆಯ ಪಾಲುದಾರರೂ ಸಹ ಅನೇಕ ರೀತಿಯಲ್ಲಿ ವಿವಿಧ ಪ್ರದೇಶದಲ್ಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ತನ್ನದೇ ಆದ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗ 3000 ಹಜ್ಮತ್ ಸೂಟ್ಗಳನ್ನು ಸರ್ಕಾರಿ ಆರೋಗ್ಯ ಸ್ವಯಂ ಸೇವಕರಿಗೆ ಹಸ್ತಾಂತರಿಸಲಾಯಿತು. ದಿನಗೂಲಿ ಕಾರ್ಮಿಕ ಕುಟುಂಬಗಳಿಗೆ 1000ಕ್ಕೂ ಅಧಿಕ ಅಗತ್ಯ ಕಿಟ್ ವಿತರಿಸಿದ್ದು, 5000ಕ್ಕೂ ಅಧಿಕ ದಿನಗೂಲಿ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಿದೆ ಎಂದು ಶೇಖರ್ ಹೇಳಿದರು. 
 

PREV
click me!

Recommended Stories

ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ
ಭಾರತದಲ್ಲಿ ಈ ವರ್ಷ ಗರಿಷ್ಠ ಮಾರಾಟವಾದ ಕಾರ್‌ಗಳ ಲಿಸ್ಟ್‌, ಮಾರುತಿಗೆ ಸಾಟಿಯೇ ಇಲ್ಲ!