TVS ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ದಿನಾಂಕ ಬಹಿರಂಗ!

Suvarna News   | Asianet News
Published : Jan 23, 2020, 03:09 PM IST
TVS ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ದಿನಾಂಕ ಬಹಿರಂಗ!

ಸಾರಾಂಶ

ಎದರ್ 450, ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಳಿಕ ಇದೀಗ TVS ಮೋಟಾರ್ಸ್ ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುತ್ತಿದೆ. ನೂತನ ಸ್ಕೂಟರ್ ಬೆಲೆ, ಮೈಲೇಜ್ ಹಾಗೂ ಇತರ ಮಾಹಿತಿ ಇಲ್ಲಿದೆ.

ಚೆನ್ನೈ(ಜ.23):  ಟಿವಿಎಸ್ ಮೋಟಾರ್ಸ್ ಕಂಪನಿಯ ಬಹುನಿರೀಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಕ್ರಿಯಾನ್  ಬಿಡುಗಡೆಗೆ ಸಜ್ಜಾಗಿದೆ. ಜನವರಿ 25 ರಂದು ನೂತನ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣಗೊಳ್ಳಲಿದೆ. ಬಜಾಜ್ ಚೇತಕ್, ಎದರ್ 450 ಸ್ಕೂಟರ್‌ಗೆ ಪ್ರತಿಸ್ಪರ್ಧಿಯಾಗಿ ಟಿವಿಎಸ್ ಕ್ರಿಯಾನ್ ಸ್ಕೂಟರ್ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕೇವಲ 2 ಸಾವಿರ ರೂ.ಗೆ ಬುಕ್ ಮಾಡಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್!

ಟಿವಿಎಸ್ ಕ್ರಿಯಾನ್ ಅನಾವರಣಕ್ಕೂ ಮುನ್ನ ಟೀಸರ್ ಬಿಡುಗಡೆಯಾಗಿದೆ. 2018ರ ಆಟೋ ಎಕ್ಸ್ಪೋದಲ್ಲಿ ಪರಿಚಯಿಸಲಾಗಿದ್ದ ಕ್ರಿಯಾನ್ ಸ್ಕೂಟರ್ ಅದೇ ವಿನ್ಯಾಸದಲ್ಲಿ ಬಿಡುಗಡೆಯಾಗುತ್ತಿದೆ. ಸ್ಪೊರ್ಟೀವ್ ಲುಕ್ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್, 4G ಹಾಗೂ ಸ್ಮಾರ್ಟ್‌ಫೋನ್ ಕೆನಕ್ಟಿವಿಟಿ, ವಾತಾವರಣ ಮಾಹಿತಿ, ಮ್ಯಾಪ್ ಸೇರಿದಂತೆ ಹಲವು ಫೀಚರ್ಸ್ ಈ ಸ್ಕೂಟರ್‌ನಲ್ಲಿದೆ.

ಇದನ್ನೂ ಓದಿ: ಎದರ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಇಳಿಕೆ; ಇಲ್ಲಿದೆ ನೂತನ ದರ ಪಟ್ಟಿ

ಎಲೆಕ್ಟ್ರಿಕ್ ಸ್ಕೂಟರ್ ಪೈಕ್ ಟಿವಿಎಸ್ ಕ್ರಿಯಾನ್ ಹೆಚ್ಚು ಶಕ್ತಿಶಾಲಿಯಾಗಿದೆ. ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಟಿವಿಎಸ್ ಕ್ರಿಯಾನ್ ಎಲೆಕ್ಟ್ರಿಕ್ ಸ್ಕೂಟರ್ ಒಂದು ಬಾರಿ ಚಾರ್ಜ್ ಮಾಡಿದರೆ 80 ಕಿ.ಮೀ ಮೈಲೇಜ್ ನೀಡಲಿದೆ. ನೂತನ ಸ್ಕೂಟರ್ ಬೆಲೆ 1 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. 

PREV
click me!

Recommended Stories

ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ
ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ