ಕೆಟ್ಟು ನಿಂತ ಭಾರತದ ಅತಿ ವೇಗದ ರೈಲು: ಏನಾಗಿತ್ತು?

Published : Feb 16, 2019, 11:57 AM IST
ಕೆಟ್ಟು ನಿಂತ ಭಾರತದ ಅತಿ ವೇಗದ ರೈಲು: ಏನಾಗಿತ್ತು?

ಸಾರಾಂಶ

ಕೆಟ್ಟು ನಿಂತ ಟ್ರೈನ್ 18 ವಂದೇ ಭಾರತ್ ಎಕ್ಸಪ್ರೆಸ್ ರೈಲು! ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ| ಚಕ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ| ತುಂಡ್ಲಾ ಜಂಕ್ಷನ್‌ನಿಂದ 15 ಕಿಲೋ ಮೀಟರ್ ದೂರದಲ್ಲಿ ಕೆಟ್ಟು ನಿಂತ ರೈಲು| ತಪಾಸಣೆ ಬಳಿಕ ವಾರಣಾಸಿ ತಲುಪಿದ ಟ್ರೈನ್ 18|

ನವದೆಹಲಿ(ಫೆ.16): ನಿನ್ನೆಯಷ್ಟೇ ಉದ್ಘಾಟನೆ ಭಾಗ್ಯ ಭಾರತದ ಮೊದಲ ಅತಿ ವೇಗದ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ವಾರಣಾಸಿಯಿಂದ ಬರುತ್ತಿದ್ದ ರೈಲು ತುಂಡ್ಲಾ ಜಂಕ್ಷನ್‌ನಿಂದ 15 ಕಿಲೋ ಮೀಟರ್ ದೂರದಲ್ಲಿ ಕೆಟ್ಟು ನಿಂತಿದೆ. ಚಕ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ರೈಲು ಹಳಿಯಲ್ಲಿ ಹಸುಗಳು ಓಡಾಡುತ್ತಿದ್ದಾಗ ಚಕ್ರ ಜಾರಿ ಈ ಘಟನೆ ನಡೆದಿದೆ. ಎಂಜಿನಿಯರ್‌ಗಳು ಈ ಬಗ್ಗೆ ತಪಾಸಣೆ ನಡೆಸುತ್ತಾರೆ ಎಂದು ಉತ್ತರ ರೈಲ್ವೆ ವಿಭಾಗದ ಸಿಪಿಆರ್‌ಒ ದೀಪಕ್ ಕುಮಾರ್ ತಿಳಿಸಿದ್ದಾರೆ.

PREV
click me!

Recommended Stories

ನಿಯಮಗಳ ಪಾಲಿಸದ ಸ್ಲೀಪರ್ ಬಸ್‌ ಸ್ಥಗಿತ: ಎನ್‌ಎಚ್‌ಆರ್‌ಸಿ
Tata Sierra vs Maruti Grand Vitara : ಯಾವ SUV ಉತ್ತಮ ಎಂಜಿನ್ ಹೊಂದಿದೆ? ಬೆಲೆ, ವೈಶಿಷ್ಟ್ಯ ತಿಳಿಯಿರಿ