* ಟೊಕಿಯೋದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ
* ಐತಿಹಾಸಿಕ ಸಾಧನೆಗೆ ಇಡೀ ದೇಶದ ಮೆಚ್ಚುಗೆ
*ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರ
* ಮಹೀಂದ್ರಾ ಕಂಪನಿಯಿಂದ ಬಹುದೊಡ್ಡ ಕೊಡುಗೆ
ಟೋಕಿಯೋ(ಆ.07): ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ ತೊಡಿಸಿದ ಜಾವಲಿನ್ ಪಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಇಡೀ ದೇಶವೇ ಕ್ರೀಡಾಪಟುವನ್ನು ಕೊಂಡಾಡುತ್ತಿದೆ. ಭಾರತೀಯ ಸೇನೆಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ಚೋಪ್ರಾ ಸಾಧನೆಯನ್ನು ಇಡೀ ದೇಶವೇ ಮೆಚ್ಚಿದೆ.
ಮಹೀಂದ್ರಾ ಕಂಪನಿಯ ಚೇರ್ ಮನ್ ಆನಂದ್ ಮಹೀಂದ್ರಾ XUV 700 ಕಾರು ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ. ಇನ್ನೊಂದು ಕಡೆ ಹರ್ಯಾಣ ಸರ್ಕಾರ 6 ಕೋಟಿ ರೂ. ಮೊತ್ತದ ಬಹುಮಾನ ಘೋಷಣೆ ಮಾಡಿದೆ.
undefined
ಶತಮಾನದ ಚಿನ್ನ ಗೆದ್ದ ನೀರಜ್ ಚೋಪ್ರಾ
ಟೋಕಿಯೋದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದೆ. ಜಾವಲಿನ್ ಫೈನಲ್ ಸ್ಪರ್ಧೆಯಲ್ಲಿ ಬರೋಬ್ಬರಿ 87.58 ಮೀಟರ್ ಎಸೆಯುವ ಮೂಲಕ ಪದಕ ಜಯಿಸಿದ್ದಾರೆ. ಭಾರತ ಸ್ವಾತಂತ್ರ್ಯಗೊಂಡ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಥ್ಲೀಟಿಕ್ಸ್ ವಿಭಾಗದಲ್ಲಿ ದೇಶಕ್ಕೆ ನೀರಜ್ ಚೋಪ್ರಾ ಮೊದಲ ಪದಕ ಗೆದ್ದು ಕೊಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಉದ್ಯೋಗಿಯಾಗಿರುವ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಮೊದಲ ಪ್ರಯತ್ನದಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 87.03 ಮೀಟರ್ ದೂರ ಎಸೆಯುವ ಮೂಲಕ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ದಿಗ್ಗಜ ಮಿಲ್ಖಾ ಸಿಂಗ್ ಕನಸನ್ನು ನೀರಜ್ ನನಸು ಮಾಡಿದ್ದಾರೆ.