ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮನೆಮಂದಿಯೊಂದಿಗೆ ನಡೆದ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ಹೇಳಲಾಗಿದೆ.
ಬಾಗಲಕೋಟೆ(ಅ.08): ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮನೆಮಂದಿಯೊಂದಿಗೆ ನಡೆದ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ಹೇಳಲಾಗಿದೆ.
ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹನಾ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.
ತುಮಕೂರಲ್ಲಿ ಪಿಕ್ ಪಾಕೆಟ್ ಮಾಡ್ತಿದ್ರು ಆಂಧ್ರದ 6 ಕಳ್ಳರು, ಜನರಿಂದ ಬಿತ್ತು ಗೂಸಾ..!
ಹೊಲಕ್ಕೆ ಹೋಗುವ ವಿಚಾರವಾಗಿ ಮನೆಯಲ್ಲಿನ ಸದಸ್ಯರೊಂದಿಗೆ ಜಗಳವಾಡಿಕೊಂಡಿದ್ದರು. ಹೊಲಕ್ಕೆ ಹೋಗುವ ವಿಚಾರದಲ್ಲಿ ನಡೆದಿದ್ದ ವಾಗ್ವಾದದ ನಂತರ ಯುವತಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪ್ರಿಯತಮೆಯ ಪತಿಯನ್ನೇ ಗುಂಡಿಟ್ಟು ಕೊಂದ ಪ್ರಿಯಕರ
[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]