ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ, ತನ್ನ ಹತ್ಯೆಗೆ ಯತ್ನ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ

Published : Jan 01, 2026, 09:32 PM IST
Clash near janardhan reddy residence

ಸಾರಾಂಶ

ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ? ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇದೀಗ ಗುಂಡಿನ ದಾಳಿ ಆರೋಪ ಕೇಳಿಬಂದಿದೆ. ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. 

ಬಳ್ಳಾರಿ (ಜ.01) ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಕಲ್ಲುತೂರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಭರತ್ ರೆಡ್ಡಿ ಬೆಂಬಲಿಗರು ಜನಾರ್ಧನ ರೆಡ್ಡಿ ಮನೆ ಮುಂದೆ ಕಲ್ಲುತೂರಾಟ ನಡೆಸಿದ್ದು ಮಾತ್ರವಲ್ಲ ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ಧನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ. ಕಲ್ಲುತೂರಾಟದ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ನಡೆಸಿದ ಗುಂಡಿನ ಕಾಟ್ರಿಜ್ ಇದು ಎಂದು ಜನಾರ್ಧನ ರೆಡ್ಡಿ ಬುಲೆಟ್ ತೋರಿಸಿ ಗಂಭೀರ ಆರೋಪ ಮಾಡಿದ್ದಾರೆ.

ಗಲಾಟೆಯಲ್ಲಿ ಗುಂಡಿನ ದಾಳಿ

ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಪೈರಿಂಗ್ ಮಾಡಿದ್ದಾರೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದರೆ. ಇದೇ ವೇಳೆ ಭರತ್ ರೆಡ್ಡಿ ದಬ್ಬಾಳಿಕೆಯ ಕುರಿತು ಜನಾರ್ದನ ರೆಡ್ಡಿ ಅರೋಪ ಮಾಡಿದ್ದಾರೆ. ಬ್ಯಾನರ್ ವಿಚಾರ ಇಟ್ಟುಕೊಂಡು ನನ್ನ ಮೇಲೆ ಹತ್ಯಾ ಯತ್ನ ನಡೆದಿದೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ದೌರ್ಜನ್ಯ ಮಾಡಿ ಬ್ಯಾನರ್ ಹಾಕಲು ರೌಡಿಗಳನ್ನು ಕರೆದುಕೊಂಡು ಬಂದಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ ಶ್ರೀರಾಮುಲು ಮೇಲೆ ಗಲಾಟೆ ಮಾಡಲು ಬಂದಿದ್ದಾರೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

ಬುಲೆಟ್ ತೋರಿಸಿ ತಮ್ಮ ಮೇಲೆ ನಡೆದ ಹತ್ಯಾ ಪ್ರಯತ್ನದ ಬಗ್ಗೆ ಜನಾರ್ಧನ ರೆಡ್ಡಿ ವಿವರಣೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಭರತ್ ರೆಡ್ಡಿ ರಾಜಕೀಯ ದ್ವೇಷದ ಜೊತೆಗೆ ವಯಕ್ತಿಕ ದ್ವೇಷದ ಮಾಡುವ ಮೂಲಕ ಹೇಡಿತನದ ರಾಜಕೀಯ ಮಾಡುತ್ತಿದ್ದಾರೆ. ಶಾಸಕರಿಗೆ ಕನಿಷ್ಠ ಭದ್ರತೆ ನೀಡದ ಹಲ್ಲೆ ಮಾಡಿ ಕೊಲೆ ಯತ್ನ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ ಜನಾರ್ದನ ರೆಡ್ಡಿ ಮನೆ ಮುಂದೆ ರೆಡ್ಡಿ ಬೆಂಬಲಿಗರು ಬಡಿಗೆ ಹಿಡಿದುಕೊಂಡು ನಿಂತಿದ್ದಾರೆ. ಭರತ್ ರೆಡ್ಡ ಗುಂಪು ಬಡಿಗೆ ತೆಗೆದುಕೊಂಡು ಬರುತ್ತಿದ್ದಾರೆ ಅನ್ನೋ ಮಾಹಿತಿ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾವಣೆಗೊಂಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

 

 

PREV
Read more Articles on
click me!

Recommended Stories

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ
ಹೊಸ ವರ್ಷದ ಕಿಕ್: ಹಂಪಿ, ಟಿಬಿ ಡ್ಯಾಂಗೆ ಹರಿದು ಬಂದ ಜನಸಾಗರ; ಲಾಡ್ಜ್ ದರ ಕೇಳಿದ್ರೆ ಪ್ರವಾಸಿಗರು ಸುಸ್ತೋ ಸುಸ್ತು!