ಸಚಿವ ಬಿ. ಶ್ರೀರಾಮುಲು ಡಿಸಿಎಂ ಆಗಬೇಕು| ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಬೇಕು ಎಂಬುದು ನಮ್ಮೆಲ್ಲರ ಒತ್ತಾಸೆಯಾಗಿದೆ ಎಂದ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ| ಉಪಮುಖ್ಯಮಂತ್ರಿ ಆಯ್ಕೆ ವೇಳೆ ಪಕ್ಷದ ಹಿರಿಯ ಮುಖಂಡರಾದ ಅಮಿತ್ ಶಾ ಅವರ ಪಟ್ಟಿಯಲ್ಲಿ ಶ್ರೀರಾಮುಲು ಅವರ ಹೆಸರಿತ್ತು| ಅದ್ಯಾಕೆ ತಡೆ ಹಿಡಿಯಲಾಯಿತೋ ಗೊತ್ತಿಲ್ಲ| ಈ ಬಗ್ಗೆ ನಮಗೆ ತುಂಬಾ ಬೇಸರವಿದೆ|
ಬಳ್ಳಾರಿ(ಅ.14): ಸಚಿವ ಬಿ. ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಬೇಕು ಎಂಬುದು ನಮ್ಮೆಲ್ಲರ ಒತ್ತಾಸೆಯಾಗಿದೆ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಆಯ್ಕೆ ವೇಳೆ ಪಕ್ಷದ ಹಿರಿಯ ಮುಖಂಡರಾದ ಅಮಿತ್ ಶಾ ಅವರ ಪಟ್ಟಿಯಲ್ಲಿ ಶ್ರೀರಾಮುಲು ಅವರ ಹೆಸರಿತ್ತು. ಅದ್ಯಾಕೆ ತಡೆ ಹಿಡಿಯಲಾಯಿತೋ ಗೊತ್ತಿಲ್ಲ. ಈ ಬಗ್ಗೆ ನಮಗೆ ತುಂಬಾ ಬೇಸರವಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ತೆರಳಿ ಮನವಿ ಮಾಡುತ್ತೇವೆ. ಅದೇ ರೀತಿ ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಸಹ ಶ್ರೀರಾಮುಲು ಅವರಿಗೆ ನೀಡಬೇಕು. ಆಗ ಮಾತ್ರ ಬಳ್ಳಾರಿ ಜಿಲ್ಲೆ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಲಕ್ಷ್ಮಣ ಸವದಿ ಅವರು ಬೆಳಗಾವಿ ಜಿಲ್ಲೆಯವರು. ಅವರು ಅಲ್ಲಿಂದ ಬಂದು ಇಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ. ಸ್ಥಳೀಯರಿಗೆ ಜಿಲ್ಲಾ ಉಸ್ತುವಾರಿ ನೀಡಿದರೆ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಸೋಮಶೇಖರ ರೆಡ್ಡಿ ಪ್ರತಿಪಾದಿಸಿದರು.