Bank Jobs: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಐಟಿ ಸ್ಪೇಷಲಿಸ್ಟ್ ಹುದ್ದೆಗೆ ನೇಮಕಾತಿ

By Suvarna News  |  First Published Nov 20, 2021, 4:53 PM IST

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಎನಿಸಿಕೊಂಡಿರುವ ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ಐಟಿ ಸ್ಪೆಷಲಿಸ್ಟ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಬ್ಯಾಂಕ್ ಉದ್ಯೋಗ ಸೇರಲು ಕಾಯುತ್ತಿರೋರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಐಟಿ ಸ್ಪೆಷಲಿಸ್ಟ್ ಆಫೀಸರ್ (ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್) ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಬ್ಯಾಂಕ್ ಆಫ್ ಬರೋಡಾ (BOB)ನೇಮಕಾತಿ ಪ್ರಕ್ರಿಯೆ ಶುರು ಮಾಡಿದ್ದು, ಡಿಸೆಂಬರ್ 6ರವರೆಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.  ಅರ್ಜಿದಾರರು ಹೆಚ್ಚಿನ ವಿವರಗಳು, ಕೊನೆಯ ದಿನಾಂಕ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ಇನ್ನಿತರ ವಿವರಗಳಿಗಾಗಿ ಬ್ಯಾಂಕ್ ಆಫ್ ಬರೋಡಾ (BOB)ದ ಅಧಿಕೃತ ವೆಬ್‌ಸೈಟ್ www.bankofbaroda.in ಗೆ ಭೇಟಿ ನೀಡಿ ಪರಿಶೀಲಿಸಬಹುದು. ಸ್ಪೆಷಲಿಸ್ಟ್ ಆಫೀಸರ್ (Specialist Officers)15 ಹುದ್ದೆಗಳು ಡೇಟಾ ಸೈಂಟಿಸ್ಟ್ (Data Scientist) ಹುದ್ದೆಗಳನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ.  ಸ್ಪೆಷಲಿಸ್ಟ್ ಆಫೀಸರ್ (Specialist Officers) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು AICTE/UGC ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ (computer Science )/ IT/ ಡೇಟಾ ಸೈನ್ಸ್ (Data Science) / ಯಂತ್ರ ಕಲಿಕೆಯಲ್ಲಿ B. Tech/ BE ಪದವಿ ಪಡೆದಿರಬೇಕು.  ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು. 

ಇನ್ನು ಡೇಟಾ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಯು AICTE/UGC ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ (computer Science) / ಮಾಹಿತಿ ತಂತ್ರಜ್ಞಾನದಲ್ಲಿ (Information Technology) ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಹೊಂದಿರಬೇಕು. ಕ್ಲೌಡೆರಾ ಪ್ರಮಾಣೀಕೃತ ನಿರ್ವಾಹಕರ ರುಜುವಾತುಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.ಸ್ಪೆಷಲಿಸ್ಟ್ ಆಫೀಸರ್ (Specialist Officers) ಹಾಗೂ ಡೇಟಾ ಸೈಂಟಿಸ್ಟ್  (Data Scientist) ಹುದ್ದೆಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಯ ವಯೋಮಿತಿ 25 ರಿಂದ 40 ವರ್ಷದೊಳಗಿರಬೇಕು.  ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ಬರೋಬ್ಬರೀ 89 ಸಾವಿರ ರೂ.ವರೆಗೆ ವೇತನ ಸಿಗಲಿದೆ.   

Latest Videos

undefined

ಆನ್‌ಲೈನ್ ಪರೀಕ್ಷೆ (MMGS-II ಮತ್ತು MMGS-III ಸ್ಥಾನಗಳಿಗೆ ಮಾತ್ರ) ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.  ಸೈಕೋಮೆಟ್ರಿಕ್ ಪರೀಕ್ಷೆ ಅಥವಾ ಮುಂದಿನ ಆಯ್ಕೆ ಪ್ರಕ್ರಿಯೆಗೆ ಸೂಕ್ತವೆಂದು ಪರಿಗಣಿಸಲಾದ ಯಾವುದೇ ಪರೀಕ್ಷೆಯನ್ನು ಆಧರಿಸಿ ಆಯ್ಕೆ ಮಾಡಬಹುದು. ಬಳಿಕ ಗುಂಪು ಚರ್ಚೆ / & ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಕರೆದು ಆಯ್ಕೆ ಮಾಡಲಾಗುತ್ತದೆ. 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 6ನೇ ಡಿಸೆಂಬರ್ ರೊಳಗೆ ಅಥವಾ ಅದಕ್ಕೂ ಮೊದಲು ಆನ್‌ಲೈನ್ ಮೋಡ್ ಮೂಲಕ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ನಂತರ, ಅರ್ಜಿದಾರರು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳುವುದು ಸೂಕ್ತ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

BSF ನೇಮಕಾತಿ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 

ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪೈಕಿ ಬ್ಯಾಂಕ್ ಆಫ್ ಬರೋಡಾ ಕೂಡ ಅಗ್ರಗಣ್ಯ ಬ್ಯಾಂಕ್ ಆಗಿದೆ. ಸಾಕಷ್ಟು ಉದ್ಯೋಗಗಳನ್ನು ಕಲ್ಪಿಸಿರುವ ಈ ಬ್ಯಾಂಕ್ ಇದೀಗ ಡೇಟಾ ಸೈಂಟಿಸ್ಟ್ (Data Scientist) ಮತ್ತು ಡೇಟಾ ಎಂಜಿನಿಯರ್ (Data Engineer) ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಿದೆ. ಖಾಲಿ ಇರುವ 15 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಡಿಸೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವಿಳಾಸಕ್ಕೆ ಭೇಟಿ ನೀಡಬಹುದು.

UPSC Recruitment: ಪ್ರೊಫೆಸರ್, ಜಂಟಿ ಸಹಾಯಕ ನಿರ್ದೇಶಕ ಸೇರಿ ಹಲವು ಹುದ್ದೆಗೆ ಅರ್ಜಿ ಆಹ್ವಾನ 

click me!