ಬೆಂಗಳೂರು(ಜ.8): ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಗುತ್ತಿಗೆ ಆಧಾರದ ಮೇಲೆ ಸಂಪತ್ತು ನಿರ್ವಹಣಾ ಸೇವೆಗಳ (Wealth Management Services) ವಿಭಾಗದಲ್ಲಿ ಖಾಲಿ ಇರುವ 58 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಿ.
ಒಟ್ಟು 58 ಹುದ್ದೆಗಳ ವಿವರ ಇಂತಿದೆ
ಸಂಪತ್ತು ತಂತ್ರಜ್ಞ ಮುಖ್ಯಸ್ಥ(Head - Wealth Strategist)-1
ಸಂಪತ್ತು ತಂತ್ರಜ್ಞ -28
ಹೂಡಿಕೆ ಸಂಶೋಧನಾ ವ್ಯವಸ್ಥಾಪಕ(Investment Research Manager)-2
Portfolio ಸಂಶೋಧನಾ ವಿಶ್ಲೇಷಕ -2
NRI ಸಂಪತ್ತು ಉತ್ಪನ್ನ ನಿರ್ವಾಹಕ (Wealth Products Manager) -2
ವ್ಯಾಪಾರ ಮತ್ತು ವಿದೇಶೀ ವಿನಿಮಯ ಉತ್ಪನ್ನ ನಿರ್ವಾಹಕ -1
ವ್ಯಾಪಾರ ನಿಯಂತ್ರಣ(Trade Regulation)ಸೀನಿಯರ್ ಮ್ಯಾನೇಜರ್ - 1
ಖಾಸಗಿ ಬ್ಯಾಂಕಿಂಗ್ ಉತ್ಪನ್ನ ಮುಖ್ಯಸ್ಥ - 1
ಗುಂಪು ಮಾರಾಟದ ಮುಖ್ಯಸ್ಥ-Virtual RM Centre-1
ಖಾಸಗಿ ಬ್ಯಾಂಕರ್-Radiance Private-20
undefined
ಈ ಮೇಲಿನ ಎಲ್ಲಾ ಹುದ್ದೆಗಳಿಗೆ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಾರ್ಯಕ್ಷಮತೆಯ ಆಧಾರದಲ್ಲಿ ಬ್ಯಾಂಕಿಂಗ್ ಗುತ್ತಿಗೆ ಅವಧಿಯನ್ನು ವಿಸ್ತರಿಸಬಹುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
CENTRAL RAILWAY RECRUITMENT 2022: MBBS ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಸುವರ್ಣವಕಾಶ, ಇಂದೇ ಅರ್ಜಿ ಸಲ್ಲಿಸಿ
ಶೈಕ್ಷಣಿಕ ವಿದ್ಯಾರ್ಹತೆ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಇನ್ ಮ್ಯಾನೇಜ್‌ಮೆಂಟ್ ಮಾಡಿರಬೇಕು.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲಿಗೆ ಶಾರ್ಟ್ ಲಿಸ್ಟಿಂಗ್ ಮಾಡಲಾಗುತ್ತದೆ. ನಂತರ ವೈಯಕ್ತಿಕ ಸಂದರ್ಶನ ಅಥವಾ ಗುಂಪು ಚರ್ಚೆ ಅಥವಾ ಯಾವುದೇ ಇತರ ಆಯ್ಕೆ ವಿಧಾನವನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅರ್ಜಿ ಶುಲ್ಕ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 600 ರೂ ಅರ್ಜಿ ಶುಲ್ಕ. ಮತ್ತು SC/ ST/PWD/ಮಹಿಳಾ ಅಭ್ಯರ್ಥಿಗಳು 100ರೂ ಇಂಟಿಮೇಷನ್ ಶುಲ್ಕವಾಗಿ ಪಾವತಿಸಬೇಕು.
Karnataka Bank Recruitment 2022: ಮಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಸುವರ್ಣಾವಕಾಶ
ಕೆವೈಸಿ ದಾಖಲೆ ಸಲ್ಲಿಕೆ ಗಡುವು ಮಾ.31ಕ್ಕೆ ವಿಸ್ತರಣೆ: ಬ್ಯಾಂಕ್(Bank) ಹಾಗೂ ಹಣಕಾಸು ಸೇವಾ ಸಂಸ್ಥೆಗಳಲ್ಲಿ (Financial Service Organizations) ಖಾತೆ ಹೊಂದಿರೋರು ಗುರುತು ಮತ್ತು ವಿಳಾಸ ಪುರಾವೆಗಳನ್ನು (KYC documents) ಅಪ್ಡೇಟ್ ಮಾಡೋ ಅವಧಿಯನ್ನು ಮೂರು ತಿಂಗಳ ತನಕ ಅಂದ್ರೆ ಮಾರ್ಚ್ 31, 2022ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ವಿಸ್ತರಿಸಿದೆ. ಕೋವಿಡ್ -19 ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿರೋದಾಗಿ ಆರ್ ಬಿಐ ತಿಳಿಸಿದೆ.
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕೆವೈಸಿ ದಾಖಲೆಗಳ ಪರಿಷ್ಕರಣೆಗೆ ಗ್ರಾಹಕರ ಮೇಲೆ ಒತ್ತಡ ಹೇರದಂತೆ ಆರ್ ಬಿಐ ಬ್ಯಾಂಕ್ ಗಳಿಗೆ 2021ರ ಮೇನಲ್ಲಿ ಸುತ್ತೋಲೆ ಹೊರಡಿಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(Anti-money laundering Act)-2002 ಹಾಗೂ ಅಕ್ರಮ ಹಣ ವರ್ಗಾವಣೆ ತಡೆ (ದಾಖಲೆಗಳ ನಿರ್ವಹಣೆ) ನಿಯಮಗಳು 2005ರ ಅನ್ವಯ ಗ್ರಾಹಕರ ಗುರುತು ಮಾಹಿತಿಗಳನ್ನು ಕಲೆ ಹಾಕುವಂತೆ ಬ್ಯಾಂಕು ಹಾಗೂ ಹಣಕಾಸು ಸಂಸ್ಥೆಗಳಿಗೆ ಆರ್ ಬಿಐ 2016ರಲ್ಲಿ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಅನ್ವಯ ಅನಾಮಿಕರ ಅಥವಾ ಬೇನಾಮಿ ಹೆಸರಿನಲ್ಲಿ ಯಾವುದೇ ಖಾತೆ ತೆರೆಯುವಂತಿಲ್ಲ. ಖಾತೆ ತೆರೆಯೋ ಸಂದರ್ಭದಲ್ಲಿ ಖಾತೆದಾರ ಗುರುತು ಮತ್ತು ವಿಳಾಸ ಪುರಾವೆಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಅಲ್ಲದೆ, ಕಾಲಕಾಲಕ್ಕೆ ಕೆವೈಸಿ ಮಾಹಿತಿಗಳನ್ನು ಪರಿಷ್ಕರಿಸಬೇಕು ಎಂದು ಆರ್ ಬಿಐ ಸೂಚಿಸಿದೆ.