Central Bank of India Recruitment 2022: ಕಚೇರಿ ಸಹಾಯಕ ಹುದ್ದೆಗೆ ಸಿಬಿಐ ನೇಮಕಾತಿ

By Suvarna News  |  First Published Mar 14, 2022, 12:56 PM IST

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.   ಆಫ್‌ಲೈನ್   ಮೂಲಕ ಅರ್ಜಿ  ಸಲ್ಲಿಸಲು ಮಾರ್ಚ್​ 21  ಕೊನೆಯ ದಿನಾಂಕವಾಗಿದೆ. 


ಬೆಂಗಳೂರು(ಮಾ.14): ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.   ಕಚೇರಿ ಸಹಾಯಕ (Office Assistant) ಹುದ್ದೆಗಳನ್ನು ಭರ್ತಿ ಮಾಡಲು  ಅಧಿಸೂಚನೆ ಹೊರಡಿಸಿದ್ದು,   ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ (Online)​ ಮೂಲಕ ಅರ್ಜಿ  ಸಲ್ಲಿಸಲು ಮಾರ್ಚ್​ 21  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ www.centralbankofindia.co.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ  B.A,B.Com,BSW ವಿದ್ಯಾರ್ಹತೆ ಪಡೆದಿರಬೇಕು.

Tap to resize

Latest Videos

undefined

ವಯೋಮಿತಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು.

Konkan Railway Recruitment 2022: ಕೊಂಕಣ ರೈಲ್ವೆಯಿಂದ ವಿವಿಧ ಎಂಜಿನಿಯರ್ ಹುದ್ದೆ

ಅರ್ಜಿ ಶುಲ್ಕ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಪ್ರಮುಖ ಪರೀಕ್ಷೆ, ಸಂದರ್ಶನದ ಮೂಲಕ ಹಂತಹಂತವಾಗಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
Regional Manager/Co-Chairman,
Dist. Level RSETI Advisory Committee (DLRAC),
Central Bank of India,
Regional Office: Muzaffarpur  Pawapuri Bihar, Bhagwanpur Chowk, Near NH-28
Muzaffarpur-842001

GOOGLE RECRUITMENT 2022: ಬೆಂಗಳೂರು ಕಛೇರಿಯಲ್ಲಿನ ಹುದ್ದೆಗೆ ದೈತ್ಯ ಗೂಗಲ್ ನೇಮಕಾತಿ

ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ: ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಒಟ್ಟು 4  ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು,   ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು  ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ  ಯಾವುದೇ  ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.

ಉಪ/ಮುಖ್ಯ ಮಾಹಿತಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.

ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು  ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.

ಅರ್ಜಿ ಶುಲ್ಕ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಿಂಗಡಿಸಲಾಗಿದೆ. ಉಪ/ಮುಖ್ಯ ಮಾಹಿತಿ ಅಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ ನಿಗದಿಯಾಗಿದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ  ಹುದ್ದೆಗಳಿಗೆ ಗರಿಷ್ಠ 45 ವರ್ಷ ನಿಗದಿಯಾಗಿದೆ. 

click me!