ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗದಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಫೆ.11): ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಖಾಲಿ ಇರುವ ತಜ್ಞ ಅಧಿಕಾರಿಗಳು (Specialist Officers) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ತಜ್ಞ ಅಧಿಕಾರಿಗಳು ಹುದ್ದೆಯ ವಿಭಾಗದಲ್ಲಿ ಹಿರಿಯ ವ್ಯವಸ್ಥಾಪಕ (Senior Manager), ಮಾಹಿತಿ ತಂತ್ರಜ್ಞಾನ ಮುಖ್ಯಸ್ಥ (Head Information Technology) ಸೇರಿ ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್ಸೈಟ್ www.centralbankofindia.co.in ಗೆ ಭೇಟಿ ನೀಡಬಹುದು.
ಒಟ್ಟು 19 ಹುದ್ದೆಗಳ ವರ್ಗಾನುಸಾರ ಮಾಹಿತಿ ಇಂತಿದೆ:
SC-2
ST-1
OBC-5
EWS-1
ಸಾಮಾನ್ಯ-10
undefined
ಶೈಕ್ಷಣಿಕ ವಿದ್ಯಾರ್ಹತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಎಂಎಸ್ಸಿ, ಎಂಸಿಎ, ಇಸಿಇ, ಐಟಿ, ಕಂಪ್ಯೂಟರ್ ಸೈನ್ಸ್, ಓದಿರಬೇಕು.
HAL Recruitment 2022: ಮ್ಯಾನೇಜ್ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PWD ಅಭ್ಯರ್ಥಿಗಳು 175 ರೂ. ಮತ್ತು ಉಳಿದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ವಯೋಮಿತಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ.
ಆಯ್ಕೆ ಪ್ರಕ್ರಿಯೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 63,840 ರಿಂದ 78,230 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ಮಾಡಲು ತಯಾರಿರಬೇಕು.
CGA Recruitment 2022: 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ: ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು (Bangalore Development Authority - BDA) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ (law officer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.bdabangalore.org/ ಗೆ ಭೇಟಿ ನೀಡಿ.
ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು ಇಂತಿದೆ.
-ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು.
-ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು.
ವೇತನ: ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000 ರೂ ವೇತನ ದೊರೆಯಲಿದೆ.
ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.