ಸಿಟಿ ಯೂನಿಯನ್ ಬ್ಯಾಂಕ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.
ಬೆಂಗಳೂರು, (ಮಾ.12): ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಸಿಟಿ ಯೂನಿಯನ್ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ.
ಅರ್ಹ ಹಾಗೂ ಅಭ್ಯರ್ಥಿಗಳು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 24,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
undefined
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ
ವಿದ್ಯಾರ್ಹತೆ: ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಠ 45 ರಿಂದ ಗರಿಷ್ಟ 52 ವರ್ಷ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಠ 40 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹದು.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸಿಟಿ ಯೂನಿಯನ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ https://www.cityunionbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 24,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ