ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಸೆ.4): ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 1558 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 23ರೊಳಗೆ ಸಲ್ಲಿಸಬಹುದು. ಇನ್ನು ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಉದ್ಯೋಗಾಕ್ಷಿಂಗಳಿಗೆ ಗುಡ್‌ನ್ಯೂಸ್: 5846 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ: 3 ವರ್ಷ ಹಾಗೂ ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಅಂಗವಿಕಲ ಅಭ್ಯರ್ಥಿ: 10 ವರ್ಷ ವಯೋಮಿತಿಯಲ್ಲಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿ 850 ರೂ. ಮತ್ತು ಎಸ್ ಸಿ, ಎಸ್ಟಿ ಅಭ್ಯರ್ಥಿಗೆ 175 ರೂ. ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02-09-2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-09-2020
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ