IBPS ನೇಮಕಾತಿ 2020: 9638 ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Jun 30, 2020, 3:49 PM IST

ಐಬಿಪಿಎಸ್ 9638 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಜೂನ್. 30): ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 9638 ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.

ಆಫೀಸರ್ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಇದೇ ಜುಲೈ 21ರೊಳಗೆ ಸಲ್ಲಿಸಲು ಕೊನೆ ದಿನವಾಗಿದೆ.

Tap to resize

Latest Videos

undefined

ಕೆಪಿಎಸ್‌ಸಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಹಾಕಿ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು. 

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 175 ರೂ. ಹಾಗೂ  ಇತರೆ ಎಲ್ಲಾ ಅಭ್ಯರ್ಥಿಗಳಿಗೆ 850 ರೂ. ನಿಗದಿಪಡಿಸಲಾಗಿದೆ.

ಈ ಬಗ್ಗೆ ಇನ್ನಿತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!