ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಐಡಿಬಿಐ ಬ್ಯಾಂಕ್ ವಿವಿಧ 1544 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜೂನ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು (ಜೂ.1): ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ( Industrial Developmental Bank of India - IDBI) ಖಾಲಿಯಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಎಕ್ಸಿಕ್ಯುಟಿವ್ ಮತ್ತು ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು. ಒಟ್ಟು 1,544 ಹುದ್ದೆಗಳ ಭರ್ತಿಯಾಗಬೇಕಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 17ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಬ್ಯಾಂಕ್ ನ ಅಧಿಕೃತ ವೆಬ್‌ತಾಣ https://www.idbibank.in/ ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 1,544 ಹುದ್ದೆಗಳ ಮಾಹಿತಿ:
ಎಕ್ಸಿಕ್ಯುಟಿವ್ (Executive) :1,044 ಹುದ್ದೆಗಳು
ಸಹಾಯಕ ಮ್ಯಾನೇಜರ್ (Assistant Manager): 500 ಹುದ್ದೆಗಳು
undefined
ಶೈಕ್ಷಣಿಕ ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಕೇವಲ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗುವುದನ್ನು ಅರ್ಹತೆಯ ಮಾನದಂಡವೆಂದು ಪರಿಗಣಿಸಲಾಗುವುದಿಲ್ಲ.
BANK OF BARODA RECRUITMENT 2022; ವಿವಿಧ ಹುದ್ದೆಗಳಿಗೆ ನೇಮಕಾತಿ
ವಯೋಮಿತಿ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ 20 ರಿಂದ 25 ವರ್ಷದ ಒಳಗೆ ವಯೋಮಿತಿ ಇರಬೇಕು. ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ 21ರಿಂದ 28 ವರ್ಷದ ಒಳಗೆ ವಯೋಮಿತಿ ಇರಬೇಕು.
ಅರ್ಜಿ ಶುಲ್ಕ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PWD ಅಭ್ಯರ್ಥಿಗಳಿಗೆ 200 ರೂ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿಯಾಗಿದೆ.
UPSC Recruitment 2022: ಉಪಪ್ರಾಂಶುಪಾಲರು ಸೇರಿ ವಿವಿಧ 161 ಹುದ್ದೆಗೆ ನೇಮಕಾತಿ
ಆಯ್ಕೆ ಪ್ರಕ್ರಿಯೆ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಟೆಸ್ಟ್, ದಾಖಲಾತಿ ಪರಿಶೀಲನೆ, ಮೆಡಿಕಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ. ಎಕ್ಸಿಕ್ಯುಟಿವ್ ಹುದ್ದೆಗಳಿಗೆ 29,000 ರೂ ನಿಂದ 34,000 ರೂ ವರೆಗೆ ವೇತನ ದೊರೆಯಲಿದೆ. ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ 36,000 ರೂ ನಿಂದ 63,840 ರೂ ವರೆಗೆ ವೇತನ ದೊರೆಯಲಿದೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಿದೆ: ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಮುಖ್ಯ ಕಲಿಕಾ ಅಧಿಕಾರಿ (Chief Learning Officer) ಮತ್ತು ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಬಹುದು.