ಇಂಡಿಯನ್ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಸಲ್ಲಿಸುವುದು ಹೀಗೆ..!

By Suvarna NewsFirst Published Jan 30, 2020, 4:47 PM IST
Highlights

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌, 2020ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 

ಬೆಂಗಳೂರು, (ಜ.30): ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 10/2/2020ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿರುತ್ತದೆ.

SSLC ಪಾಸಾದವರಿಗೆ ಉದ್ಯೋಗವಕಾಶ: 2792 ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಜುಲೈ 1,2019ಕ್ಕೆ ಅನ್ವಯವಾಗುವಂತೆ ಕನಿಷ್ಟ 20 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳನ್ನು ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವೇತನ ಶ್ರೇಣಿ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700 ರಿಂದ 51,490 ರೂ. (ತಿಂಗಳಿಗೆ) 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.   

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 600 ರೂ. SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಶುಲ್ಕವನ್ನ ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.indianbank.net.in/jsp/IBSDisclaimer.jsp ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

click me!