ಇಂಡಿಯನ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಕ್ರೀಡಾಕೋಟದ ಮೇಲೆ 12 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬೆಂಗಳೂರು (ಮೇ.5): ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ (Indian Bank), 2022ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕ್ರೀಡಾಕೋಟದ ಅಡಿಯಲ್ಲಿ JMG ಸ್ಕೇಲ್ I ರಲ್ಲಿ ಕ್ಲರ್ಕ್ / ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ್ ವೆಬ್‌ತಾಣ https://indianbank.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾಭ್ಯಾಸ: ಇಂಡಿಯನ್ ಬ್ಯಾಂಕ್ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
undefined
ವಯೋಮಿತಿ: ಇಂಡಿಯನ್ ಬ್ಯಾಂಕ್ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 26 ವರ್ಷದ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ: ಇಂಡಿಯನ್ ಬ್ಯಾಂಕ್ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಗತ್ಯ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು 1:10 ಅನುಪಾತದಲ್ಲಿ ಆಯ್ಕೆ ಮಾಡಿ. ಅರ್ಜಿಯ ಸ್ಕ್ರೀನಿಂಗ್, ಆಯಾ ಕ್ರೀಡೆಯಲ್ಲಿ ಟ್ರಯಲ್‌ಗಳ ನಡವಳಿಕೆ ಮತ್ತು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
CANARA BANK RECRUITMENT 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ ವಿವರ: ಇಂಡಿಯನ್ ಬ್ಯಾಂಕ್ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ₹45,930 ರಿಂದ ₹63,840 ವೇತನ ದೊರೆಯಲಿದೆ.
ಅರ್ಜಿ ಶುಲ್ಕ: ಇಂಡಿಯನ್ ಬ್ಯಾಂಕ್ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PWBD ಅಭ್ಯರ್ಥಿಗಳು ₹100 ಮತ್ತು ಇತರ ವರ್ಗದ ಅಭ್ಯರ್ಥಿಗಳು ₹400 ಅರ್ಜಿ ಶುಲ್ಕ ಪಾವತಿಸಬೇಕು.
SECR Apprentice Recruitment 2022 ರೈಲ್ವೆ ಇಲಾಖೆ ಸೇರ ಬಯಸುವವರಿಗೆ ಸುವರ್ಣಾವಕಾಶ
ವಿವಿಧ ಹುದ್ದೆಗಳಿಗೆ ಕೆನರಾ ಬ್ಯಾಂಕ್ ಅರ್ಜಿ ಆಹ್ವಾನ: ಕೆನರಾ ಬ್ಯಾಂಕ್ (Canara Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಉಪ ವ್ಯವಸ್ಥಾಪಕ (Deputy Manager), ಸಹಾಯಕ ವ್ಯವಸ್ಥಾಪಕ (Assistant Manager), ಸೇರಿ ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ.20 ಕೊನೆಯ ದಿನವಾಗಿದೆ. ಪ್ರಮುಖ ಅಂಶವೆಂದರೆ ಮೇಲಿನ ಎಲ್ಲಾ ಪೋಸ್ಟ್‌ಗಳಿಗೆ, ಅಭ್ಯರ್ಥಿಗಳು ಕಂಪ್ಯೂಟರ್ ಪ್ರಾವೀಣ್ಯತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ https://www.canmoney.in/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕೆನರಾ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ / ಇನ್‌ಸ್ಟ್ರುಮೆಂಟೇಶನ್ ಅಥವಾ ಎಂಸಿಎಯಲ್ಲಿ BE / B Tech, ಪದವಿ ಅಥವಾ MCA ಮಾಡಿರಬೇಕು. ಪದವಿಯಲ್ಲಿ ಶೇ.50 ಅಂಕಗಳು ಪಡೆದಿರಬೇಕು.