ಕರ್ಣಾಟಕ ಬ್ಯಾಂಕ್‌ನಲ್ಲಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಜ.10): ಕರ್ಣಾಟಕ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ನೇಮಕಾತಿಗೆ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಜನವರಿ 18, 2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
undefined
3553 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಯಾವದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 16, 2020ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ಮತ್ತಷ್ಟು ಜಾಬ್ಸ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ: 1 ಜನವರಿ 2020ಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸಲು ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಕರ್ಣಾಟಕ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. https://karnatakabank.com/