ಕರ್ನಾಟಕ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ.
ಬೆಂಗಳೂರು(ಜ.8): ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆಫ್‌ಲೈನ್ (Offline) ಮೂಲಕ ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು karnatakabank.com ಗೆ ಭೇಟಿ ನೀಡಿ.
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅರ್ಜಿ ಸಲ್ಲಿಸಿಸ ಅಭ್ಯರ್ಥಿಯ ಗರಿಷ್ಠ ವಯಸ್ಸು ಡಿಸೆಂಬರ್ 31, 2021ಕ್ಕೆ 30 ವರ್ಷಗಳಾಗಿರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಟಕ ಬ್ಯಾಂಕ್ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ , SC/ST ಅಭ್ಯರ್ಥಿಗಳು-400 ರೂ. , ಎಲ್ಲಾ ಇತರ ಅಭ್ಯರ್ಥಿಗಳು-600 ರೂ., ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
UPSC RECRUITMENT 2022: ಗಣಿಗಾರಿಕೆ ಭೂವಿಜ್ಞಾನಿ ಸೇರಿ 78 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಮಾನದಂಡ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಮತ್ತು ತಿಂಗಳಿಗೆ 1,00,500 ರೂ ವೇತನ ದೊರೆಯಲಿದೆ.
ಅರ್ಜಿ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಮಹಾವೀರ ಸರ್ಕಲ್
ಕಂಕನಾಡಿ
ಮಂಗಳೂರು- 575002
IRFC Recruitment 2022: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ
ಕೆವೈಸಿ ದಾಖಲೆ ಸಲ್ಲಿಕೆ ಗಡುವು ಮಾ.31ಕ್ಕೆ ವಿಸ್ತರಣೆ: ಬ್ಯಾಂಕ್(Bank) ಹಾಗೂ ಹಣಕಾಸು ಸೇವಾ ಸಂಸ್ಥೆಗಳಲ್ಲಿ (Financial Service Organizations) ಖಾತೆ ಹೊಂದಿರೋರು ಗುರುತು ಮತ್ತು ವಿಳಾಸ ಪುರಾವೆಗಳನ್ನು (KYC documents) ಅಪ್ಡೇಟ್ ಮಾಡೋ ಅವಧಿಯನ್ನು ಮೂರು ತಿಂಗಳ ತನಕ ಅಂದ್ರೆ ಮಾರ್ಚ್ 31, 2022ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ವಿಸ್ತರಿಸಿದೆ. ಕೋವಿಡ್ -19 ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿರೋದಾಗಿ ಆರ್ ಬಿಐ ತಿಳಿಸಿದೆ.
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕೆವೈಸಿ ದಾಖಲೆಗಳ ಪರಿಷ್ಕರಣೆಗೆ ಗ್ರಾಹಕರ ಮೇಲೆ ಒತ್ತಡ ಹೇರದಂತೆ ಆರ್ ಬಿಐ ಬ್ಯಾಂಕ್ ಗಳಿಗೆ 2021ರ ಮೇನಲ್ಲಿ ಸುತ್ತೋಲೆ ಹೊರಡಿಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(Anti-money laundering Act)-2002 ಹಾಗೂ ಅಕ್ರಮ ಹಣ ವರ್ಗಾವಣೆ ತಡೆ (ದಾಖಲೆಗಳ ನಿರ್ವಹಣೆ) ನಿಯಮಗಳು 2005ರ ಅನ್ವಯ ಗ್ರಾಹಕರ ಗುರುತು ಮಾಹಿತಿಗಳನ್ನು ಕಲೆ ಹಾಕುವಂತೆ ಬ್ಯಾಂಕು ಹಾಗೂ ಹಣಕಾಸು ಸಂಸ್ಥೆಗಳಿಗೆ ಆರ್ ಬಿಐ 2016ರಲ್ಲಿ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಅನ್ವಯ ಅನಾಮಿಕರ ಅಥವಾ ಬೇನಾಮಿ ಹೆಸರಿನಲ್ಲಿ ಯಾವುದೇ ಖಾತೆ ತೆರೆಯುವಂತಿಲ್ಲ. ಖಾತೆ ತೆರೆಯೋ ಸಂದರ್ಭದಲ್ಲಿ ಖಾತೆದಾರ ಗುರುತು ಮತ್ತು ವಿಳಾಸ ಪುರಾವೆಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಅಲ್ಲದೆ, ಕಾಲಕಾಲಕ್ಕೆ ಕೆವೈಸಿ ಮಾಹಿತಿಗಳನ್ನು ಪರಿಷ್ಕರಿಸಬೇಕು ಎಂದು ಆರ್ ಬಿಐ ಸೂಚಿಸಿದೆ.