Karnataka Bank Recruitment 2022: ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಕರ್ನಾಟಕ ಬ್ಯಾಂಕ್ ನೇಮಕಾತಿ

By Suvarna News  |  First Published Mar 3, 2022, 9:58 PM IST

ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ.8 ಕೊನೆಯ ದಿನವಾಗಿದೆ.


ಬೆಂಗಳೂರು(ಮಾ.03): ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಮಂಗಳೂರಿನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ (Chief Financial Officer) ಹುದ್ದೆಗಳಿಗೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್‌ಲೈನ್ (Online)​ ಮೂಲಕ  ಮಾ.8ರೊಳಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು karnatakabank.com ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ ಸಿಎ (Chartered Accountant) ಪಾಸು ಮಾಡಿರಬೇಕು.

Tap to resize

Latest Videos

undefined

ವಯೋಮಿತಿ:  ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಠ 55 ವಯೋಮಿತಿ ಒಳಗಿರಬೇಕು.

WESTERN NAVAL COMMAND RECRUITMENT 2022: ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾದ WNC

ಕೆಲಸದ ಅನುಭವ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವಸ್ಥರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಮಾನದಂಡ, ಅನುಭವ, ವಿದ್ಯಾರ್ಹತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

CEERI Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಇಇಆರ್‌ಐ

ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank), 2022ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 202 ಭದ್ರತಾ ಸಿಬ್ಬಂದಿ (Security Guard)​ ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ indianbank.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ  10 ನೇ ತರಗತಿ ಪಾಸಾಗಿರಬೇಕು. ಅಥವಾ ಕಡ್ಡಾಯವಾಗಿ ಮಾಜಿ ಸೈನಿಕರಾಗಿರಬೇಕು. ಜೊತೆಗೆ ಅಲ್ಲದೆ, ಅಭ್ಯರ್ಥಿಯು ಸ್ಥಳೀಯ ಆಡುಭಾಷೆಯಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ಸಮರ್ಥರಾಗಿರಬೇಕು.

ವಯೋಮಿತಿ: ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ  26 ವರ್ಷವಾಗಿರಬೇಕು ಮತ್ತು ಗರಿಷ್ಠ 29 ವರ್ಷವಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ , ಆನ್‌ಲೈನ್ ಪರೀಕ್ಷೆ , ಭಾಷಾ ಪರೀಕ್ಷೆ, ದೈಹಿಕ  ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 14500 ರೂ ನಿಂದ 28,000 ರೂ ವರೆಗೆ ವೇತನ ದೊರೆಯಲಿದೆ.

click me!