Karnataka Bank recruitment 2022: ದೇಶದಾದ್ಯಂತ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published May 11, 2022, 12:40 PM IST

ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು  ಮೇ 21 ಕೊನೆಯ ದಿನವಾಗಿದೆ.
 


ಬೆಂಗಳೂರು(ಮೇ.11): ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಬ್ರ್ಯಾಂಚ್ ಮತ್ತು ಪ್ರಮುಖ ಕೇಂದ್ರಗಳಲ್ಲಿ ಇರುವ  ಗುಮಾಸ್ತ ( Clerk ) ಹುದ್ದೆಗಳಿಗೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್‌ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.karnatakabank.com/ ಗೆ ಭೇಟಿ ನೀಡಲು ಕೋರಲಾಗಿದೆ. ನೇಮಕಾತಿ ಅಧಿಸೂಚನೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ  ಕನಿಷ್ಠ 60% ನೊಂದಿಗೆ ಪದವಿ ಪಾಸು ಮಾಡಿರಬೇಕು.

Tap to resize

Latest Videos

undefined

ವಯೋಮಿತಿ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಠ 26 ವರ್ಷ ವಯೋಮಿತಿ ಹೊಂದಿರಬೇಕು. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

North Bengaluru ಮುಂದಿನ ಉದ್ಯಮ ಕೇಂದ್ರ, 3.5ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿ ಸಾಧ್ಯತೆ

ಅರ್ಜಿ ಶುಲ್ಕ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹700 ಅರ್ಜಿ ಶುಲ್ಕ ಪಾವತಿಸಬೇಕು. SC/ST ಅಭ್ಯರ್ಥಿಗಳು ₹600 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಜೂನ್ 2022 ರಲ್ಲಿ ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮುಂಬೈ, ಮೈಸೂರು, ನವದೆಹಲಿ ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾದ ಆನ್‌ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹43,000 ವೇತನ ದೊರೆಯಲಿದೆ.

IPPB RECRUITMENT 2022: ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಒಟ್ಟು 650 ಹುದ್ದೆಗಳು ಖಾಲಿ  

ಇಂಡಿಯನ್‌ ಬ್ಯಾಂಕ್‌ ನ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ:  ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank), 2022ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.   ಕ್ರೀಡಾಕೋಟದ ಅಡಿಯಲ್ಲಿ JMG ಸ್ಕೇಲ್ I ರಲ್ಲಿ ಕ್ಲರ್ಕ್ / ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಒಟ್ಟು 12 ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ್ ವೆಬ್‌ತಾಣ https://indianbank.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾಭ್ಯಾಸ: ಇಂಡಿಯನ್‌ ಬ್ಯಾಂಕ್‌ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಇಂಡಿಯನ್‌ ಬ್ಯಾಂಕ್‌ ನಲ್ಲಿ ಕ್ರೀಡಾಕೋಟದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 26 ವರ್ಷದ ಒಳಗಿರಬೇಕು.

 

click me!