SBI Recruitment 2022: ಕನ್ನಡ ಗೊತ್ತಿದ್ದರಷ್ಟೇ ರಾಜ್ಯದಲ್ಲಿ ನೌಕರಿ..!

By Kannadaprabha NewsFirst Published Dec 26, 2021, 6:01 AM IST
Highlights

*  1226 ಸರ್ಕಲ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ
*  ಅಭ್ಯರ್ಥಿಗಳಿಗೆ ಆಯಾ ರಾಜ್ಯಗಳಲ್ಲಿನ ಭಾಷೆ ಗೊತ್ತಿರಬೇಕು
*  ಸ್ಥಳೀಯ ಭಾಷೆಗೆ ಆದ್ಯತೆ ನೀಡುವ ಹೋರಾಟಕ್ಕೆ ಮನ್ನಣೆ
 

ನವದೆಹಲಿ(ಡಿ.26):  ಸಾರ್ವಜನಿಕ ವಲಯದಲ್ಲಿ ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ಬೆಂಗಳೂರು(Bengaluru) ಸೇರಿದಂತೆ ದೇಶದ 5 ವಲಯಗಳಿಗೆ 1226 ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು, ಅದರಲ್ಲಿ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆಯ(Local Language) ಜ್ಞಾನ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ನೇಮಕಾತಿ(Recruitment) ವೇಳೆ ಸ್ಥಳೀಯ ಭಾಷೆಗಳಿಗೆ ಮನ್ನಣೆ ನೀಡಬೇಕು ಎಂದು ಆಗ್ರಹ ಕೇಳಿಬಂದಿದ್ದವು. ಇದಕ್ಕೆ ಎಸ್‌ಬಿಐ ನೇಮಕಾತಿ ವೇಳೆ ಮನ್ನಣೆ ಸಿಕ್ಕಿದೆ.

ಬೆಂಗಳೂರಿನಲ್ಲಿ 278 ಸೇರಿದಂತೆ ಅಹಮದಾಬಾದ್‌, ಭೋಪಾಲ್‌, ಚೆನ್ನೈ ಮತ್ತು ಜೈಪುರದ ವಿವಿಧ ಶಾಖೆಗಳಿಗೆ 1226 ಸರ್ಕಲ್‌ ಬೇಸ್ಡ್‌ ಆಫೀಸರ್‌ (ಸಿಬಿಒ- ವಲಯ ಆಧರಿತ ಅಧಿಕಾರಿ) ಹುದ್ದೆ ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಒಂದು ವಲಯದಿಂದ ಇನ್ನೊಂದು ವಲಯಕ್ಕೆ ವರ್ಗವಾಗುವ ಅವಕಾಶ ಇರುವುದಿಲ್ಲ. ಅಂದರೆ ಬೆಂಗಳೂರು ವಲಯದವರು ಬೇರೆ ರಾಜ್ಯಗಳಿಗೆ ವರ್ಗವಾಗುವ(Transfer) ಅವಕಾಶ ಇಲ್ಲ, ಅದೇ ರೀತಿ ಬೇರೆ ರಾಜ್ಯಗಳಲ್ಲಿ ಇದೇ ರೀತಿಯ ಹುದ್ದೆಗೆ ನೇಮಕವಾದವರು ಕರ್ನಾಟಕಕ್ಕೆ(Karnataka) ವರ್ಗ ಆಗುವ ಅವಕಾಶವೂ ಇಲ್ಲ.

Latest Videos

ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 13 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೀಗಾಗಿ ಯಾವುದೇ ರಾಜ್ಯಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆ ರಾಜ್ಯದ ಭಾಷೆ ಬಗ್ಗೆ ಜ್ಞಾನ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ಜೊತೆಗೆ ಆ ರಾಜ್ಯದ ಸ್ಥಳೀಯ ಭಾಷೆಯನ್ನೇ ಒಂದು ವಿಷಯವಾಗಿ ಎಸ್‌ಎಸ್‌ಎಲ್‌ಸಿ(SSLC) ಅಥವಾ ಪಿಯುಸಿಯಲ್ಲಿ(PUC) ಅಧ್ಯಯನ ಮಾಡಿದವರಿಗೆ ಭಾಷಾ ಜ್ಞಾನ ಪರೀಕ್ಷೆಯಿಂದ ವಿನಾಯ್ತಿ ನೀಡಲಾಗಿದೆ. ಅಂದರೆ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿಯಲ್ಲಿ ಕನ್ನಡವನ್ನು(Kannada) ಒಂದು ಭಾಷೆಯಾಗಿ ಅಧ್ಯಯನ ಮಾಡಿದ್ದರೆ ಅಂಥ ಅಭ್ಯರ್ಥಿಗಳು(Candidates) ಭಾಷಾ ಪರೀಕ್ಷೆ ಬರೆದು, ಭಾಷೆಯ ಕುರಿತು ತಮ್ಮ ಜ್ಞಾನವನ್ನು ಸಾಬೀತುಪಡಿಸುವ ಅವಶ್ಯಕತೆ ಇಲ್ಲ.

ಕನಿಷ್ಠ 21, ಗರಿಷ್ಠ 30 ವರ್ಷ ವಯಸ್ಸಿನ ಅರ್ಹರು ಈ ಹುದ್ದೆಗಳಿಗೆ ಡಿ.29ಕ್ಕೆ ಮುನ್ನ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪಶು ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ : ಚವ್ಹಾಣ್‌

ಬೆಳಗಾವಿ: ಪಶು ಸಂಗೋಪನೆ ಇಲಾಖೆಯಲ್ಲಿ (Animal Husbandry Department ) ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ ಎಂದು ತಿಳಿಸಿರುವ ಸಚಿವ ಪ್ರಭು ಚೌವ್ಹಾಣ್‌ (Prabhu Chavan) ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyutappa) ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದರು.  

ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದಿದ್ದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯ್ದೆ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳಿಗೆ ಸಿಬ್ಬಂದಿ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು.

Shivamogga District Court Recruitment 2022: PUC ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ಕೋರ್ಟ್​​ನಲ್ಲಿ ವಿವಿಧ​ ಹುದ್ದೆ

ಪ್ರತಿಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್‌ ಹಾಗೂ ವಿಧಾನಸಭೆಯಲ್ಲಿ ಸದಸ್ಯರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಸಿಬ್ಬಂದಿ ಕೊರತೆ ಕುರಿತು ಪ್ರಶ್ನೆ ಹಾಕುವುದು ವಾಡಿಕೆಯಾಗಿತ್ತು.

ಕಳೆದ ಸರ್ಕಾರದ ಅವಧಿಯಲ್ಲಿ ಬಿ.ಎಸ್‌.ಯಡಿಯೂರಪ್ಪ (BS Yediyurappa)  ಅವರೊಂದಿಗೆ ನೇಮಕಾತಿ ಕುರಿತು ಚರ್ಚೆ ನಡೆಸಿದ್ದೆ. ಅಲ್ಲದೆ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪಶುಸಂಗೋಪನೆ ಇಲಾಖೆಗೆ ನೇಮಕಾತಿಯಲ್ಲಿ ಇರುವ ತೊಡಕುಗಳ ಕುರಿತು ಮಾತುಕತೆ ನಡೆಸಿದ್ದೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಪಶುಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಗಳಿಂದ ಎದುರಾಗುತ್ತಿರುವ ಸಮಸ್ಯೆ ಕುರಿತು ಹಲವು ಬಾರಿ ಚರ್ಚೆ ನಡೆಸಲಾಗಿತ್ತು. ಇದೀಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಿಂದಾಗಿ ಇಲಾಖೆಯ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವೇಗ ದೊರೆಯಲಿದ್ದು ಪಶುಸಂಗೋಪನೆ ಇಲಾಖೆ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದರು. 

click me!