ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಾಲಾ ಸೀತಾರಾಮನ್ ಭೇಟಿಯಾದ ಜೋಶಿ

By Suvarna NewsFirst Published Jul 13, 2021, 8:55 PM IST
Highlights

* ಬ್ಯಾಂಕಿಂಗ್ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಬರೆಯುವ ವಿಚಾರ
* ಕೇಂದ್ರ ಹಣಕಾಸು ಸಚಿವೆ ನಿರ್ಮಾಲ ಸೀತಾರಾಮನ್ ಭೇಟಿಯಾದ ಸಚಿವ ಪ್ರಹ್ಲಾದ್ ಜೋಶಿ
 * ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS)  ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚೆ

ನವದೆಹಲಿ/ಬೆಂಗಳೂರು, (ಜು.13): ಬ್ಯಾಂಕಿಂಗ್ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಬರೆಯುವ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆ  ನಿರ್ಮಾಲ ಸೀತಾರಾಮನ್ ಅವರನ್ನ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದರು.

ಇಂದು (ಮಂಗಳವಾರ) ನದೆಹಲಿಯಲ್ಲಿ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS) ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚೆ ಮಾಡಿದರು.

SBI ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ರದ್ದು: ಉದ್ಯೋಗಾಕಾಂಕ್ಷಿಗಳ ಕನಸು ನುಚ್ಚುನೂರು

ಈ ವೇಳೆ ನಿರ್ಮಲಾ ಸೀತಾರಾಮನ್ ಅವರು ಒಂದು ಸಮಿತಿ ರಚಿಸುವುದಾಗಿ  ಭರವಸೆ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಭೇಟಿ ಆಗಿ ಬ್ಯಾಂಕಿಂಗ ಪರೀಕ್ಷೆಗಳನ್ನು (IBPS) ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಚಿವರು ಸ್ಥಳಿಯ ಭಾಷೆಗಳಲ್ಲಿಯೇ ಪರೀಕ್ಷೆಗಳನ್ನು ನಡೆಸುವ ದೃಷ್ಟಿಯಿಂದ ಒಂದು ಸಮಿತಿಯನ್ನು ರಚಿಸುವದಾಗಿ ತಿಳಿಸಿದ್ದಾರೆ. pic.twitter.com/6dKos3g1DN

— Pralhad Joshi (@JoshiPralhad)

ಸಿದ್ದು ಕಿಡಿ
ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಅವರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

click me!